ಬನ್ನೂರು ದೈಯ್ಯೆರೆ ಮಾಡ ಬ್ರಹ್ಮಕಲಶೋತ್ಸವದ ಕೃತಜ್ಞತಾ ಸಭೆ

0

ತಿಂಗಳ ಸಂಕ್ರಮಣ ಪೂಜೆಗೆ ಊರವರು ಭಾಗವಹಿಸಿ – ಎ.ವಿ.ನಾರಾಯಣ
ಎಲ್ಲರ ಸಹಕಾರದಿಂದ ಬ್ರಹ್ಮಕಲಶ ಯಶಸ್ವಿಯಾಗಿದೆ – ವಿಶ್ವನಾಥ ಗೌಡ


ಪುತ್ತೂರು: ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರು ಮತ್ತು ಆನೆಮಜಲು ನ್ಯಾಯಾಲಯದ ಸಂಕೀರ್ಣದ ಬಳಿಯ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಫೆ.22ರಂದು ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಮಾ.10ರಂದು ಕ್ಷೇತ್ರದ ಸಾನಿಧ್ಯದಲ್ಲಿ ಕೃತಜ್ಞತಾ ಸಭೆ ನಡೆಯಿತು.


ತಿಂಗಳ ಸಂಕ್ರಮಣ ಪೂಜೆಗೆ ಊರವರು ಭಾಗವಹಿಸಿ:
ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ವಿ.ನಾರಾಯಣ ಅವರು ಮಾತನಾಡಿ ಬ್ರಹ್ಮಕಲಶೋತ್ಸವ ಮುಗಿದ ತಕ್ಷಣ ನಮ್ಮ ಜವಾಬ್ದಾರಿ ಮುಗಿದಿಲ್ಲ. ತಂತ್ರಿಗಳ ಮಾರ್ಗದರ್ಶನದಂತೆ ಕಾರ್ಯಕ್ರಮ ನಡೆಯಬೇಕಾಗಿದೆ. ತಿಂಗಳ ಸಂಕ್ರಮಣದಂದು ಪೂಜೆಯ ಸಂದರ್ಭ ಊರವರು ಎಲ್ಲರು ಭಾಗವವಹಿಸುವಂತೆ ಮನವಿ ಮಾಡಿದ ಅವರು ಮುಂದಿನ ವರ್ಷ ಪ್ರತಿಷ್ಠಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಬೇಕಾಗಿದೆ. ಅದಕ್ಕೂ ಮೊದಲು ತಂತ್ರಿಗಳ ಮಾರ್ಗದರ್ಶನದಂತೆ ಗುಳಿಗ ಸಾನಿಧ್ಯ ಜೀರ್ಣೋದ್ದಾರ ಕಾರ್ಯ ನಡೆಯಬೇಕಾಗಿದೆ ಎಂದರು.


ಎಲ್ಲರ ಸಹಕಾರದಿಂದ ಬ್ರಹ್ಮಕಲಶ ಯಶಸ್ವಿಯಾಗಿದೆ:
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಬನ್ನೂರು ಅವರು ಮಾತನಾಡಿ ಬ್ರಹ್ಮಕಲಶೋತ್ಸವದ ಕಾರ್ಯದಲ್ಲಿ ಎಲ್ಲರ ಸಹಕಾರ ಉತ್ತಮ ರೀತಿಯಲ್ಲಿ ನಡೆದಿದೆ. ಭಕ್ತರಿಗೆ ಎಲ್ಲೂ ಲೋಪ ಆಗದಂತೆ ಕಾರ್ಯಕರ್ತರು ತುಂಬಾ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಿದ್ದಾರೆ ಎಂದರು. ಇದೇ ಸಂದರ್ಭ ಲೆಕ್ಕಪತ್ರ ಮಂಡನೆ ಮಾಡಲಾಯಿತು. ಇದೇ ಸಂದರ್ಭ ಸ್ವಯಂ ಸೇವಕರು ಮತ್ತು ಕಾರ್ಯಕರ್ತರನ್ನು ಗೌರವಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ಕೆಳಗಿನಮನೆ, ಖಜಾಂಚಿ ರಮೇಶ್ ಗೌಡ ನೀರ್ಪಾಜೆ, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ

LEAVE A REPLY

Please enter your comment!
Please enter your name here