ಕೌಕ್ರಾಡಿ: ಕುಣಿತ ಭಜನಾ ತರಬೇತಿ ಸಮಾರೋಪ

0

ನೆಲ್ಯಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಕಡಬ ತಾಲೂಕು ಇದರ ಸಹಯೋಗದೊಂದಿಗೆ ಧರ್ಮಶ್ರೀ ಮಹಿಳಾ ಭಜನಾ ಮಂಡಳಿ ಹೊಸಮಜಲು-ಕೌಕ್ರಾಡಿ ಇವರ ಆಶ್ರಯದಲ್ಲಿ ನಡೆದ ಕುಣಿತ ಭಜನಾ ತರಬೇತಿಯ ಸಮಾರೋಪ ಸಮಾರಂಭ ಅಣ್ಣುಗುಂಡಿ ವಸಂತಭಾರತಿಯವರ ಮನೆ ‘ಕುಮಾರಕೃಪಾ ನಿಲಯ’ದಲ್ಲಿ ನಡೆಯಿತು.


ಹಿರಿಯ ಭಜಕರಾದ ಸುಬ್ರಹ್ಮಣ್ಯ ಆಚಾರ್ಯರವರು ಉದ್ಘಾಟಿಸಿ ಶುಭ ಹಾರೈಸಿದರು. ಕೌಕ್ರಾಡಿ ಹೊಸಮಜಲು ಧರ್ಮಶ್ರೀ ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ಭಾರತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಸದಸ್ಯರಾದ ಸತ್ಯನಾರಾಯಣ ಹೆಗ್ಡೆ ನಡುಮಜಲು, ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಸಮನ್ವಯಾಧಿಕಾರಿ ವಾಸು ಪೂಜಾರಿ ಮುಂಡಾಜೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಸುಂದರ ಗೌಡ ಬಿಳಿನೆಲೆ, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಮಂಗಳೂರು ವೆನ್ಲಾಕ್ ಆಸ್ಪತ್ರೆ ಕಿ.ಮಾ.ಸ.ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲೆ ಕೆ.ಎಸ್.ಮೀನಾಕ್ಷಿ, ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪದಾಧಿಕಾರಿ ರವಿಚಂದ್ರ ಹೊಸವಕ್ಲು, ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಹಾರ್ಪಳರವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.

ಭಜನಾ ತರಬೇತುದಾರರಾದ ವಿನೋದ್, ಜನಾರ್ದನ, ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ ಬಿಳಿನೆಲೆ ಹಾಗೂ ಐಶ್ವರ್ಯ ಅವರಿಗೆ ಫಲ, ಪುಷ್ಪ ನೀಡಿ ಶಾಲು ಹೊದಿಸಿ ಗೌರವಿಸಲಾಯಿತು. ಭಜನಾ ಮಂಡಳಿ ಸದಸ್ಯರಿಂದ ಭಜನಾ ಪ್ರಾತ್ಯಕ್ಷಿಕೆ ನಡೆಸಲಾಯಿತು. ಧರ್ಮಶ್ರೀ ಮಹಿಳಾ ಭಜನಾ ಮಂಡಳಿ ಕಾರ್ಯದರ್ಶಿ ವಸಂತಿ ವರದಿ ವಾಚಿಸಿದರು. ಚಂದ್ರಶೇಖರ ಅಣ್ಣುಗುಂಡಿ ಪ್ರಾರ್ಥಿಸಿದರು. ಭಜನಾ ಮಂಡಳಿ ಸದಸ್ಯೆ ನವ್ಯ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಶಿಲ್ಪಾ ಸ್ವಾಗತಿಸಿ, ಸುದೀಕ್ಷಾ ವಂದಿಸಿದರು. ಕಾರ್ಯಕ್ರಮಕ್ಕೆ ಅಶ್ವತ್ಥ ಗೆಳೆಯರ ಬಳಗ ಹೊಸಮಜಲು, ಸೇವಾಪ್ರತಿನಿಧಿ ನಮಿತಾ ಶೆಟ್ಟಿ, ಗುಣಕರ, ದೇವಿಪ್ರಸಾದ್, ವಿಶ್ವನಾಥ ಹಾಗೂ ಭಜನಾ ಮಂಡಳಿಯ ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here