ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ

0

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘದ ವತಿಯಿಂದ ಗ್ರಾಹಕರೊಂದಿಗೆ ಮಹಿಳಾ ದಿನಾಚರಣೆಯನ್ನು ಸಂಘ ಕಚೇರಿಯಲ್ಲಿ ಆಚರಿಸಲಾಯಿತು. ಸುನೀತಾ ಟೈಲರ್ ಉದ್ಘಾಟಿಸಿದರು. ನೆಲ್ಯಾಡಿ ಸಾಂದ್ರ ಬ್ಯೂಟಿಪಾರ್ಲರ್‌ನ ವಿ.ಎ.ರೋಸಮ್ಮರವರು ಕೇಕ್‌ಕಟ್ ಮಾಡಿ ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಮಧೇನು ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಉಷಾ ಅಂಚನ್‌ರವರು ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿಯಬೇಕು ಹಾಗೂ ಇತರರಿಗೆ ಮಾದರಿಯಾಗಿರಬೇಕು ಎಂದು ಹೇಳಿದರು.

ಸನ್ಮಾನ:
ಹಾಳೆತಟ್ಟೆ ಮತ್ತು ಹೋಟೆಲ್ ಉದ್ಯಮ ನಡೆಸಿ ಮಾದರಿ ಮಹಿಳೆಯಾಗಿ ಗುರುತಿಸಿಕೊಂಡಿರುವ ಕಾಮಧೇನು ಮಹಿಳಾ ಸಹಕಾರ ಸಂಘದ ನಿರ್ದೇಶಕಿಯೂ ಆಗಿರುವ ಶಾಲಿನಿಶೇಖರ ಪೂಜಾರಿ, ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರ ಸಾಧನೆ ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ನಿರ್ದೇಶಕಿ ರತಿ ಸ್ವಾಗತಿಸಿದರು. ಅಕೌಂಟೆಂಟ್ ಶುಭಲಕ್ಷ್ಮಿ ವಂದಿಸಿದರು. ಸಂಘದ ಸಿಬ್ಬಂದಿ ಶ್ವೇತ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ದಿವ್ಯ ಪಿ. ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಸಂಘದ ಉಪಾಧ್ಯಕ್ಷೆ ಮೇಘನಾ ಶೈನ್ ಹಾಗೂ ನಿರ್ದೇಶಕರು, ಸಿಬ್ಬಂದಿಗಳು, ಗ್ರಾಹಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here