ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಭೆ

0

ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಭೆ ನಡೆಯಿತು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಪುತ್ತುಬಾವ ಹಾಜಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಶ್ರಫ್ ಶಾ ಮಾಂತೂರು ಅವರು ಶಾಲಾ ಶೈಕ್ಷಣಿಕ ಬೆಳವಣಿಗೆ ಹಾಗೂ ಮುಂದಿನ ವರ್ಷದ ಯೋಜನೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು.

ಅತಿಥಿಯಾಗಿ ಆಗಮಿಸಿದ ಹಾವೇರಿ ವಿವೇಕಾನಂದ ಶಾಲೆಯ ಆಡಳಿತ ನಿರ್ದೇಶಕರು, ವಿದ್ವಾಸರೂ ಆಗಿರುವ ಮುಸ್ತಫಾ ಮುಯಿನಿ ಅವರು ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರ ಪಾತ್ರ ಎಂಬ ವಿಷಯವನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾಗಜಿನ್‌ನ ಮುಖಪುಟ ಬಿಡುಗಡೆ ಮಾಡಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹಾಗೂ ಈ ವರ್ಷ ನಡೆದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿ ಮತ್ತು ತರಗತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಂತರ ಸಂಸ್ಥೆಯ ಕಾರ್ಯದರ್ಶಿ ಬಶೀರ್ ಹಾಜಿ ಪೋಷಕರನ್ನುದ್ದೇಶಿಸಿ ಮಾತನಾಡಿದರು.

ಶಿಕ್ಷಕಿಯರಾದ ಪ್ರಜ್ವಲ, ಸೋಫಿಯಾ ರೋಚ್, ಮುನೀಝಾ, ಪವಿತ್ರ ಹಾಗೂ ಶಿಕ್ಷಕ ಇಮ್ತಿಯಾಝ್ ಸಿ.ಎಂ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಮಾತಾಡಿದರು. ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ ಸದಸ್ಯ ಅಬ್ದುಲ್ ರಜಾಕ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಕರಾಟೆ ಪ್ರದರ್ಶನ ನಡೆಯಿತು. ಶಾಲಾ ಪ್ರಾಂಶುಪಾಲರಾದ ರಂಝಿ ಮುಹಮ್ಮದ್ ಸ್ವಾಗತಿಸಿದರು. ಶಿಕ್ಷಕಿಯರಾದ ಫಾತಿಮತ್ ಅಮೀರ ಹಾಗೂ ಸಿನ್ವಾನ ಕಾರ್ಯಕ್ರಮ ನಿರೂಪಿಸಿದರು. ರಶೀದ್ ಸಖಾಫಿ ವಂದಿಸಿದರು. ಬೋಧಕ ಮತ್ತು ಬೋಧಕೇತರ ವರ್ಗದವರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here