ನಾಳೆ(ಮಾ.12): ಕೆದಂಬಾಡಿ ಗ್ರಾಮ ಸಭೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.12ರಂದು ಬೆಳಿಗ್ಗೆ ಗ್ರಾಪಂ ಕಟ್ಟಡದ ಮೇಲಂಸ್ತಿನ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರ ಮಾರ್ಗದರ್ಶನದಲ್ಲಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಗೆ ಗ್ರಾಮದ ಎಲ್ಲಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ದಿಗೆ ಸೂಕ್ತ ಸಲಹೆ ಸೂಚನೆ ಕೊಡುವ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸುವಂತೆ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಉಪಾಧ್ಯಕ್ಷೆ ಜಯಲಕ್ಷ್ಮಿ ಬಲ್ಲಾಳ್, ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಗ್ರೇಡ್1 ಕಾರ್ಯದರ್ಶಿ ಸುನಂದ ರೈ ಹಾಗೂ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here