ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ನೇಮಕ

0

ಕಡಬ: ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುತ್ತಿದ್ದು ಈ ನಡುವೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಿದೆ.

ಕಡಬ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ, ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.
ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿರುವ ಇವರು ಬಿಳಿನೆಲೆ ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕಡಬ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ, ಸತತ ಮೂರು ಬಾರಿ ಗ್ರಾಮ ಪಂಚಾಯತಿ ಸದಸ್ಯರಾಗಿ ಹಾಗೂ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಪ್ರಸ್ತುತ ಬಿಳಿನೆಲೆ ಗ್ರಾಮ ಪಂಚಾಯತಿ ಸದಸ್ಯರಾಗಿ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here