ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಕಿಂಡರ್ ಗಾರ್ಡನ್ ಗ್ರಾಜುಯೇಷನ್ ಡೇ

0

ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಶಾಲೆಯ ಯು.ಕೆ.ಜಿ. ವಿದ್ಯಾರ್ಥಿಗಳಿಗೆ ಕಿಂಡರ್ ಗಾರ್ಡನ್ ಗ್ರಾಜುಯೇಷನ್ ಡೇ ಕಾರ್ಯಕ್ರಮ ನಡೆಯಿತು.
ಎರಡು ವರ್ಷಗಳ ಪೂರ್ವ ಪ್ರಾಥಮಿಕ ಹಂತ ಪೂರ್ಣಗೊಳಿಸಿ 2024-25 ನೇ ಶೈಕ್ಷಣಿಕ ವರ್ಷದಿಂದ 1 ನೇ ತರಗತಿಗೆ ಕಾಲಿಡುತ್ತಿರುವ ಯು.ಕೆ.ಜಿ. ಮಕ್ಕಳಿಗೆ ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವತಿಯಿಂದ ಅಭಿನಂದನ ಕಾರ್ಯಕ್ರಮವು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾಗ ಫಾತಿಮ ನಸ್ರೀನ್ ಬಷೀರ್ ರವರ ಅಧ್ಯಕ್ಷತೆಯಲ್ಲಿ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು.

ವಿಶ್ವ ವಿದ್ಯಾಲಯಗಳಲ್ಲಿ ನಡೆಸುವ ಘಟಿಕೋತ್ಸವ ಮಾದರಿಯಲ್ಲಿ ಮಕ್ಕಳಿಗೆ ಪದವಿ ಪ್ರಧಾನದ ಮೇಲಂಗಿ ಮತ್ತು ಟೋಪಿ ಧರಿಸಲಾಗಿತ್ತು ಹಾಗೆಯೇ ಪೂರ್ವ ಪ್ರಾಥಮಿಕ ಹಂತ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು. ಬಳಿಕ ಎಲ್.ಕೆ.ಜಿ. ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.

ಮುಖ್ಯ ಅಥಿತಿಯಾಗಿ ಆಗಮಿಸಿದ್ದ ವೈದ್ಯೆ ಮಕ್ಕಳ ದಂತ ತಜ್ಞೆ ಡಾ.ಫಾತಿಮಾ ಇಶ್ರತ್ ರವರು ಮಾತನಾಡಿ ಡಾಕ್ಟರ್ ಅಬ್ದುಲ್ ಬಷೀರ್ ರವರ ನೇತ್ರತ್ವದಲ್ಲಿ ಕಾರ್ಯಾಚರಿಸುತ್ತಿರುವ ಜನಪ್ರಿಯ ಶಾಲೆಯು ಅತ್ಯಂತ ಯಶಸ್ವಿಯಾಗಿ ಮುಂದುವರಿಯುತ್ತಿದ್ದು ಪೋಷಕರ ಸಹಕಾರವು ಸಂಸ್ಥೆಯ ಹಾಗೂ ಮಕ್ಕಳ ಉನ್ನತ ಬೆಳವಣಿಗೆಗೆ ಕಾರಣವಾಗಲಿದೆ. ಕಿಂಡರ್ ಗಾರ್ಡನ್ ಗ್ರಾಜುಯೇಷನ್ ಪ್ರಮಾಣ ಪತ್ರ ಸ್ವೀಕರಿಸಿದ ಜನಪ್ರಿಯ ಶಾಲೆಯ ಮಕ್ಕಳು ಮುಂದೆ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಉನ್ನತ ಪದವಿಯನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ನಿರ್ದೇಶಕರಾದ ನೌಶೀನ್ ಬದ್ರಿಯಾ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಪದವಿ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು. ಶಾಲೆಯ ಪ್ರಾಂಶುಪಾಲರಾದ ಲಿಬಿನ್ ಕ್ಸೇವಿಯರ್, ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್. ಕೆ.ಜಿ. ಮಕ್ಕಳು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here