ಮಾ.14: ಪುತ್ತೂರಿನಲ್ಲಿ ನಮೋ ಭಾರತ್‌ನಿಂದ ಶ್ರೇಷ್ಠ ಭಾರತ್ ಕಾರ್ಯಕ್ರಮ-ಚಕ್ರವರ್ತಿ ಸೂಲಿಬೆಲೆ ಆಗಮನ, ಪುತ್ತೂರಿನಲ್ಲಿ ಜಿಲ್ಲೆಯ ಪ್ರಥಮ ಕಾರ್ಯಕ್ರಮ

0

ಪುತ್ತೂರು: ಭಾರತವನ್ನು ಶ್ರೇಷ್ಠ ಭಾರತವನ್ನಾಗಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ನಮೋ ಭಾರತ್ ತಂಡದಿಂದ ಮಾ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಹಿಂದಿನ ಗದ್ದೆಯಲ್ಲಿ ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಮೋ ಭಾರತ್ ಕಾರ್ಯಕರ್ತ ರಾಜೇಶ್ ಬನ್ನೂರು ತಿಳಿಸಿದ್ದಾರೆ.


ಮಾ.12ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮುಖ್ಯವಾಗಿ ಯುವ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಯುವ ಸಮುದಾಯವನ್ನು ರಾಷ್ಟ್ರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಉದ್ದೇಶದೊಂದಿಗೆ ನಮೋ ಭಾರತ್ ಕೆಲಸ ಮಾಡುತ್ತಿದೆ. ಈಗಾಗಲೇ ದೇಶಾದ್ಯಂತ ಹೆಸರು ಮಾಡಿರುವ ನಮೋ ಭಾರತ್ ತಂಡದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ರಾಜ್ಯಾದ್ಯಂತ 50 ಕಾರ್ಯಕ್ರಮಗಳನ್ನು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಸಲಾಗಿದೆ. ಪುತ್ತೂರಿನಲ್ಲಿ ಜಿಲ್ಲೆಯಲ್ಲಿ ಪ್ರಥಮ ಕಾರ್ಯಕ್ರಮ ನಡೆಯುತ್ತಿದೆ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.


ದೇಶದಲ್ಲಿ ಆಗುತ್ತಿರುವ ಪರಿವರ್ತನೆಯ ವಿಚಾರಗಳನ್ನು ಕಾರ್ಯಕ್ರಮದಲ್ಲಿ ತಿಳಿಸುವ ಜತೆಗೆ ವಿದ್ಯಾರ್ಥಿ ಸಮುದಾಯದಿಂದ ಆಗಬೇಕಾದ ರಾಷ್ಟ್ರ ಕಾರ್ಯಗಳ ಕುರಿತು ಚಕ್ರವರ್ತಿ ಸೂಲಿಬೆಲೆಯವರು ಅರಿವು ಮೂಡಿಸಲಿದ್ದಾರೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ವಿನಂತಿಸಿದರು.
ನಮೋ ಭಾರತದ ತಾಲೂಕು ಸಂಚಾಲಕ ಶಶಿಧರ ನಾಯಕ್, ಕಾರ್ಯಕರ್ತರಾದ ಅವಿನಾಶ್ ನಾಯ್ಕ್, ಶೇಖರ್ ಬನ್ನೂರು, ನಿವೇದಿತಾ ಬಾಳಿಗ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here