ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಉಮಾನಾಥ ಶೆಟ್ಟಿ

0

ಉಪ್ಪಿನಂಗಡಿ: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಉಮಾನಾಥ ಶೆಟ್ಟಿ ಪೆರ್ನೆ ನೇಮಕಗೊಂಡಿದ್ದಾರೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಈ ನೇಮಕ ಮಾಡಿ ಆದೇಶಿಸಿದ್ದಾರೆ. ಉಮಾನಾಥ ಶೆಟ್ಟಿ ಪೆರ್ನೆಯವರು ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದು, ಕಡಬ ಬ್ಲಾಕ್‌ನ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿಯಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತರಬೇತಿದಾರರಾಗಿ ನೇವೆ ಸಲ್ಲಿಸುತ್ತಿದ್ದು, ಪೆರ್ನೆ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಪೆರ್ನೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಪೆರ್ನೆ ಸಿಎ ಬ್ಯಾಂಕ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here