ಕೆಮ್ಮಾಯಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜೆ

0

ಕೆಮ್ಮಾಯಿ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿಯಲ್ಲಿ ಶ್ರೀ ಮಹಾವಿಷ್ಣು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ ವತಿಯಿಂದ 42ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಮಾ.11ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.


ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶಾಭಿಷೇಕ, ಸೀಯಾಳಾಭಿಷೇಕ, ಶ್ರೀ ನಾಗ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ ನಡೆದು ರಾತ್ರಿ 7ರಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಡೆಯಿತು.


ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ಅಧ್ಯಕ್ಷೆ ಉಮಾವತಿ ಹೊನ್ನಪ್ಪ ಗೌಡ, ಕಾರ್ಯದರ್ಶಿ ಅಶೋಕ ಯಚ್, ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಪತಿ ಬೈಪಾಡಿತ್ತಾಯ, ಶ್ರೀಧರ ಬೈಪಾಡಿತ್ತಾಯ, ಸಮಿತಿಯ ಪದಾಧಿಕಾರಿಗಳು, ಭಕ್ತರು ಬೆಳಿಗ್ಗೆಯಿಂದ ಮಧ್ಯಾಹ್ನದರೆಗೆ ವಿಶೇಷವಾಗಿ ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ, ಮಹಾಮಂಗಳಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸತ್ಯನಾರಾಯಣ ಪೂಜೆಯನ್ನು ಭಕ್ತರು ಪ್ರತ್ಯೇಕವಾಗಿ ಮಾಡಿಸಿದರು. ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಕೊನೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here