ಪುತ್ತೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಲೋಕಾಯುಕ್ತ ಜನಸಂಪರ್ಕ ಸಭೆ ಪುತ್ತೂರು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ.ಸೈಮನ್, ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಂಬಂಧಪಟ್ಟ ಇಲಾಖೆಗೆ ಬಗೆಹರಿಸಲು ಸೂಚಿಸಿದರು.
ಸಭೆಯಲ್ಲಿ ಒಟ್ಟು 8 ದೂರುಗಳು ಸ್ವೀಕಾರವಾಗಿದ್ದು 5 ದೂರುಗಳು ಕಂದಾಯ ಇಲಾಖೆಗೆ, ಹಾಗೂ ನಗರಸಭೆ, ಅರಣ್ಯ, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿ ಒಂದೊಂದು ಅಹವಾಲುಗಳು ಬಂದಿದ್ದವು. ಪುತ್ತೂರು ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹನುಮ ರೆಡ್ಡಿ, ತಾಲೂಕು ಪಂಚಾಯತ್ ಯೋಜನಾ ನಿರ್ದೇಶಕಿ ಶೈಲಜಾ, ಉಪ ತಹಶೀಲ್ದಾರ್ ರಾಮಣ್ಣ ನಾಯ್ಕ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಾರಾಮ್, ತಾಲೂಕು ವೈದ್ಯಾಧಿಕಾರಿ ದೀಪಕ್ ರೈ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಪ್ರಭಾರ ಸಿಡಿಪಿಒ ಮಂಗಳಾ, ಲೋಕಾಯುಕ್ತ ಪೊಲೀಸ್ ಸಿಬಂದಿಗಳಾದ ಮಹೇಶ್, ಶರತ್, ರಾಧಾಕೃಷ್ಣ, ಪಂಪಣ್ಣ ಹಾಗೂ ದುಂಡಪ್ಪ ಉಪಸ್ಥಿತರಿದ್ದರು.