ದ.ಕ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ.ಬ್ರಿಜೇಶ್ ಚೌಟ

0

ಪುತ್ತೂರು:ರಾಷ್ಟ್ರದ 18ನೇ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಂಡಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.ಚುನಾವಣೆ ಘೋಷಣೆಗೆ ಮೊದಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಪ್ರತಿಷ್ಠಿತ ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಭೂಸೇನೆಯ ನಿವೃತ್ತ ಸೇನಾಧಿಕಾರಿ ಕ್ಯಾ|ಬ್ರಿಜೇಶ್ ಚೌಟ ಅವರನ್ನು ಆಯ್ಕೆ ಮಾಡಿದೆ.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ನೀಡಲಾಗಿದೆ.


ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಮೂಡಬಿದ್ರೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವನ್ನು ಮೂರನೇ ಬಾರಿಗೆ ಪ್ರತಿನಿಽಸುತ್ತಿರುವ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಕೊಕ್ ನೀಡಲಾಗಿದ್ದು ರಾಜ್ಯ ಬಿಜೆಪಿಯ ಕಾರ್ಯದರ್ಶಿ, ದ.ಕ. ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಬಿಜೆಪಿ ಯುವಮೋರ್ಛಾದ ಮಾಜಿ ಪ್ರಧಾನ ಕಾರ್ಯದರ್ಶಿ ಮಂಗಳೂರು ಕಂಬಳದ ರೂವಾರಿಯೂ ಮಂಗಳೂರು ಲಿಟ್ ಫೆಸ್ಟ್‌ನ ಆಯೋಜಕರೂ ಆಗಿರುವ ನಿವೃತ್ತ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಮಣೆ ಹಾಕಲಾಗಿದೆ.ಮಾಜಿ ಮುಖ್ಯಮಂತ್ರಿ,ಮಾಜಿ ಕೇಂದ್ರ ಸಚಿವರೂ ಆಗಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ವಿ.ಸದಾನಂದ ಗೌಡ ಅವರಿಗೂ ಈ ಬಾರಿ ಪಕ್ಷ ಅವಕಾಶ ನಿರಾಕರಿಸಿದೆ.


ಬಿಜೇಶ್ ಚೌಟ ಪರಿಚಯ:
ಬ್ರಿಜೇಶ್ ಚೌಟರವರು ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ಹೆಸರು ಮಾಡಿ ಸೇನೆಗೆ ಸೇರ್ಪಡೆಯಾಗಿದ್ದರು.ಮಂಗಳೂರಿನ ಮಿಲಾಗ್ರಿಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ ಚೌಟ ಅವರು ಬಳಿಕ ಮಧ್ಯಪ್ರದೇಶದ ಇಂಧೋರ್ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು.ಪದವಿಯಲ್ಲಿದ್ದಾಗ ಎನ್‌ಸಿಸಿಯಲ್ಲಿ ಮಂಗಳೂರು ವಿ.ವಿ.ಯಲ್ಲಿ ಬೆಸ್ಟ್ ಕೆಡೆಟ್ ಎಂದು ಗುರುತಿಸಿಕೊಂಡಿದ್ದಲ್ಲದೆ ದೆಹಲಿ ರಿಪಬ್ಲಿಕ್ ಪೆರೇಡ್‌ನಲ್ಲಿ ಎನ್‌ಸಿಸಿ ಕೆಡೆಟ್ ಆಗಿ ಪಾಲ್ಗೊಂಡಿದ್ದರು.ಯುಪಿಎಸ್‌ಸಿ ಆಯೋಜಿಸುವ ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್‌ನಲ್ಲಿ ಪರೀಕ್ಷೆ ಬರೆದು ನಂತರ ನಡೆದ ಎಸ್‌ಎಸ್‌ಬಿ ಇಂಟರ್‌ವ್ಯೂನಲ್ಲಿ ತೇರ್ಗೆಡೆಗೊಂಡು ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆಯ ಪ್ರತಿಷ್ಠಿತ 8 ಗೋರ್ಖಾ ರೈಫಲ್ಸ್‌ನ 7ನೇ ಬೆಟಾಲಿಯನ್‌ನಲ್ಲಿ ಅಽಕಾರಿಯಾಗಿ ಸೇವೆ ಸಲ್ಲಿಸಿದ್ದರು.ಅಸ್ಸಾಂ,ಮಣಿಪುರಗಳಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು.2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ ಬ್ರಿಜೇಶ್ ಚೌಟ ಅವರು ಆರ್‌ಎಸ್‌ಎಸ್ ಹಾಗೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.2013ರಲ್ಲಿ ದಕ್ಷಿಣ ಕನ್ನಡ ಯುವಮೋರ್ಚಾದ ಜಿಲ್ಲಾ ಕಾರ್ಯದರ್ಶಿ, 2016ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.ಆ ನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಬ್ರಿಜೇಶ್ ಚೌಟ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.ಇತ್ತೀಚೆಗಷ್ಟೇ ರಾಜ್ಯ ಬಿಜೆಪಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣಾ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು.ರಾಜ್ಯ ಬಿಜೆಪಿ ಚುನಾವಣಾ ಸಮಿತಿಯ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದ ಸಂದರ್ಭ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾದ ಮಾಜಿ ಐಪಿಎಸ್ ಅಽಕಾರಿ ಅಣ್ಣಾಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದರು.


ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಚೌಟ, ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸೇವಾ ಚಟುವಟಿಕೆಯನ್ನು ನಡೆಸಿದ್ದರು.ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು.ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ,2019ರಿಂದ ಪ್ರತಿ ವರ್ಷ ಲಿಟ್ -ಸ್ಟ್ ಸಂಘಟಿಸುವ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.


2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೂಡಾ ಒಬ್ಬರು.ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ ಯುವಕರನ್ನು ಕಟ್ಟಿಕೊಂಡು ಸತತ ಆರು ವರ್ಷಗಳಿಂದ ‘ಮಂಗಳೂರು ಕಂಬಳ’ ಹೆಸರಲ್ಲಿ ಕಂಬಳ ನಡೆಸುತ್ತಿದ್ದಾರೆ.ಸಾಮಾಜಿಕ,ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ಬ್ರಿಜೇಶ್ ಚೌಟರವರಿಗೆ ಈಗ ಬಿಜೆಪಿ ದ.ಕ.ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ.ಅವಿವಾಹಿತರಾಗಿರುವ ಬ್ರಿಜೇಶ್ ಚೌಟ ಅವರು ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದವರಾಗಿದ್ದು ಪ್ರಸ್ತುತ ಮಂಗಳೂರು ನಿವಾಸಿಯಾಗಿದ್ದಾರೆ.


ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ:
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪಕ್ಷ ಆಯ್ಕೆ ಮಾಡಿದೆ.ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಽಸುತ್ತಿರುವ ಮಾಜಿ ಸಿಎಂ., ಮಾಜಿ ಕೇಂದ್ರ ಸಚಿವರೂ ಆಗಿರುವ ಪುತ್ತೂರಿನ ಮಾಜಿ ಶಾಸಕ ಡಿ.ವಿ.ಸದಾನಂದ ಗೌಡ ಅವರಿಗೆ ಈ ಬಾರಿ ಪಕ್ಷ ಅವಕಾಶ ನಿರಾಕರಿಸಿದೆ.


ಕಡಬ ತಾಲೂಕಿನ ಚಾರ್ವಾಕ ಗ್ರಾಮದ ದಿ.ಮೋನಪ್ಪ ಗೌಡ ಮತ್ತು ಪೂವಕ್ಕ ದಂಪತಿ ಪುತ್ರಿಯಾಗಿರುವ ಶೋಭಾ ಕರಂದ್ಲಾಜೆ ಅವರು ಕರ್ನಾಟಕ ಬಿಜೆಪಿಯ ಪ್ರಮುಖ ನಾಯಕಿ.ಚಿಕ್ಕ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ಸೇವಿಕಾ ಸಮಿತಿಯಲ್ಲಿ ತೊಡಗಿಸಿಕೊಂಡ ಶೋಭಾ ಕರಂದ್ಲಾಜೆಯವರು 1994ರಲ್ಲಿ ರಾಜಕೀಯ ಜೀವನಕ್ಕೆ ಪ್ರವೇಶಿಸಿದರು.2010ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ನೇಮಕಗೊಳ್ಳುವ ಮೂಲಕ ಶೋಭಾರವರು ರಾಜಕೀಯದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದರು.

1999ರಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದರು.ರಾಜಕೀಯ ಹಾಗೂ ಸಾಮಾಜಿಕವಾಗಿ ತಮ್ಮ ಕಟ್ಟಾ ಹಿಂದುತ್ವದ ವಿಚಾರಧಾರೆಗಳಿಂದ ಹೆಸರು ಪಡೆದಿರುವ ಶೋಭಾ ಕರಂದ್ಲಾಜೆ ಅವರು ಆರಂಭದಲ್ಲಿ ಕುಮಾರಧಾರ ನದಿಗೆ ಡ್ಯಾಂ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ನಡೆಸಲಾಗಿದ್ದ ‘ಕುಮಾರಧಾರ ಉಳಿಸಿ’ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.ಬಳಿಕ ಬಿಜೆಪಿಯಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು.ವಿಧಾನ ಪರಿಷತ್ ಸದಸ್ಯರಾಗಿ, ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಯೂ ಇವರು ಕರ್ತವ್ಯ ನಿರ್ವಹಿಸಿದ್ದಾರೆ.2008ರಲ್ಲಿ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಬೆಂಗಳೂರು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಶಾಲಿಯಾಗಿದ್ದ ಶೋಭಾ, ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿ ಉನ್ನತ ಹುದ್ದೆಯನ್ನು ಅಲಂಕರಿಸಿದರು.ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಶೋಭಾರವರು ಬಿಜೆಪಿಯಿಂದ ಯಡಿಯೂರಪ್ಪ ನೇತೃತ್ವದ ಕೆಜೆಪಿಗೆ ಸೇರ್ಪಡೆಗೊಂಡು 2013ರಲ್ಲಿ ನಡೆದ ಚುನಾವಣೆಯಲ್ಲಿ ಪರಾಭವಗೊಂಡರು.ಬಳಿಕ ಮತ್ತೆ ಬಿಜೆಪಿಯಲ್ಲಿ ಗುರುತಿಸಿಕೊಂಡು 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪಽಸಿ ಸದಸ್ಯರಾಗಿ ಚುನಾಯಿತರಾದರು.2014ರಲ್ಲಿ ಮಹಿಳಾ ಸಬಲೀಕರಣ ಕಮಿಟಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.೨೦೧೯ರ ಲೋಕಸಭಾ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿ ನರೇಂದ್ರ ಮೋದಿಯವರ ಸರಕಾರದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರದ ಕೆಲವು ಸಚಿವರು ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿದ್ದ ಖಾತೆಯನ್ನು ವಿವಿಧ ಸಚಿವರುಗಳಿಗೆ ಹೆಚ್ಚುವರಿಯಾಗಿ ವಹಿಸಿಕೊಡಲಾಗಿತ್ತು.ಈ ಪೈಕಿ ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಂಸ್ಕರಣೆ ಹೆಚ್ಚುವರಿ ಹೊಣೆ ನೀಡಲಾಗಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಶೋಭಾ ಅವರಿಗೆ ಟಿಕೆಟ್ ನೀಡುವುದಕ್ಕೆ ಸಂಬಂಧಿಸಿ ಪಕ್ಷದ ಕಾರ್ಯಕರ್ತರಿಂದಲೇ ಅಪಸ್ವರ ಕೇಳಿ ಬಂದಿತ್ತು.ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ‘ಗೋಬ್ಯಾಕ್ ಶೋಭಾ’ಅಭಿಯಾನವನ್ನೂ ನಡೆಸಿದ್ದರು.ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಈ ಬಾರಿ ಶೋಭಾ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಅವಕಾಶ ನೀಡಲಾಗಿದೆ.ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆ
ದ.ಕ.ಕ್ಷೇತ್ರದಿಂದ ನಾಲ್ಕನೇ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ನಿರೀಕ್ಷೆಯಲ್ಲಿದ್ದ ಸಂಸದ, ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಈ ಬಾರಿ ಕೈಬಿಟ್ಟು ನಿವೃತ್ತ ಸೇನಾಽಕಾರಿ ಬ್ರಿಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿರುವ ಮಾಜಿ ಸಿ.ಎಂ.,ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷರೂ ಆಗಿರುವ ಡಿ.ವಿ.ಸದಾನಂದ ಗೌಡ ಅವರ ಬದಲಿಗೆ ಈ ಬಾರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಲ್ಲಿ ಅವಕಾಶ ನೀಡಲಾಗಿದೆ.ಈ ಮೂಲಕ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಕರಾವಳಿಯ ಇಬ್ಬರು ಬಿಜೆಪಿ ನಾಯಕರಿಗೂ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿದೆ.

ಹಿಂದುತ್ವವೇ ಬದ್ಧತೆ, ಅಭಿವೃದ್ಧಿಯೇ ಆದ್ಯತೆ-ಚೌಟ
ಹಿಂದುತ್ವವೇ ನನ್ನ ಬದ್ಧತೆ.ಅಭಿವೃದ್ಧಿಯೇ ಆದ್ಯತೆ.ಈ ಎರಡೂ ಆದ್ಯತೆ ಇಟ್ಟುಕೊಂಡು ಪಾರ್ಟಿಯ ಎಲ್ಲರ ಸಹಕಾರ ಪಡೆದುಕೊಂಡು ಕೆಲಸ ಮಾಡಿಕೊಂಡು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವತ್ತ ನಮ್ಮ ಸಂಕಲ್ಪದತ್ತ ಕೆಲಸ ಮಾಡಲಿದ್ದೇನೆ ಎಂದು ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕ್ಯಾ|ಬ್ರಿಜೇಶ್ ಚೌಟ ಹೇಳಿದ್ದಾರೆ.

ಹೊಸಬರಿಗೆ ಅವಕಾಶ ನೀಡುವುದಿದ್ದರೆ ನನ್ನ ಅಡ್ಡಿಯಿಲ್ಲವೆಂದು 6 ತಿಂಗಳ ಹಿಂದೆಯೇ ಹೇಳಿದ್ದೆ-ನಳಿನ್
ನಾನು ಪಾರ್ಟಿಯ ಕಟ್ಟಾಳು. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ.ವಾಜಪೇಯಿ ಹೇಳಿದಂತೆ ಸಾಯುವವರೆಗೆ ಇರುವುದು ಕಾರ್ಯಕರ್ತ ಹುದ್ದೆ. ನನಗೆ ಕಾರ್ಯಕರ್ತ ಎನ್ನುವ ಹುದ್ದೆಯೇ ದೊಡ್ಡದು ಅಂದುಕೊಂಡಿದ್ದೇನೆ.ನಾನು 6 ತಿಂಗಳ ಹಿಂದೆಯೇ ನಮ್ಮ ಜಿಲ್ಲೆಯಲ್ಲಿ ಪರಿವರ್ತನೆ ಮಾಡುವುದಿದ್ದರೆ ಅವಕಾಶಗಳಿದ್ದಾವೆ, ಹೊಸಬರಿಗೆ ಅವಕಾಶ ನೀಡುವುದಿದ್ದರೆ ನನ್ನ ಅಡ್ಡಿಯಿಲ್ಲ ಎಂದು ಹೇಳಿದ್ದೆ. ಇಂದು ನಾನು ಎಲ್ಲರಿಗೂ ಸಂಪೂರ್ಣ ಸಹಕಾರ ಕೊಟ್ಟು ಬಿಜೆಪಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಕಾರ್ಯಕರ್ತರ ತೀರ್ಮಾನವೇ ಅಂತಿಮ-ಪುತ್ತಿಲ
ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ ಕ್ಯಾ|ಬ್ರಿಜೇಶ್ ಚೌಟ ಅವರ ಹೆಸರು ಘೋಷಣೆಯಾದ ಬೆನ್ನಲ್ಲೇ, ಪುತ್ತಿಲ ಪರಿವಾರದ ಮುಂದಿನ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.ಈ ಕುರಿತು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರನ್ನು ಮಾತನಾಡಿಸಿದಾಗ, ‘ಇಲ್ಲಿ ನನ್ನೊಬ್ಬನ ತೀರ್ಮಾನ ಏನೂ ಇಲ್ಲ.ನಮ್ಮ ಪರಿವಾರದ ಕಾರ್ಯಕರ್ತರ ತೀರ್ಮಾನವೇ ಅಂತಿಮ’ ಎಂದಷ್ಟೆ ಪ್ರತಿಕ್ರಿಯಿಸಿದ್ದಾರೆ.


ಚೌಟರಿಗೆ ಪುತ್ತೂರಿನ ನಂಟು:
ಶಾಸಕ ಉರಿಮಜಲು ರಾಮ ಭಟ್ ಅವರ ಅವಽಯಿಂದಲೇ ಬಿಜೆಪಿಯಲ್ಲಿ ಸಕ್ರಿಯರಾಗಿದ್ದ, ಪುತ್ತೂರು ಬಿಜೆಪಿಯ ಮಾಜಿ ಅಧ್ಯಕ್ಷ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರೂ ಆಗಿರುವ ಜಯರಾಮ ರೈ ಸಾಂತ್ಯ ಅವರ ಪತ್ನಿ ಪ್ರ-ಲ್ಲಾ ಜೆ.ರೈಯವರ ಸಹೋದರಿ ತಲಪ್ಪಾಡಿ ದೊಡ್ಡಮನೆ ಪುಷ್ಪಾ ಚೌಟ ಮತ್ತು ಪ್ರಸನ್ನ ಚೌಟರ ಮಗನಾಗಿರುವ ಬ್ರಿಜೇಶ್ ಚೌಟರು ಪ್ರಸ್ತುತ ಮಂಗಳೂರುನಲ್ಲಿ ವಾಸವಾಗಿದ್ದಾರೆ.ಇವರ ಸಹೋದರ ಗಿರಿಜೇಶ್ ಚೌಟ ಬೆಂಗಳೂರುನಲ್ಲಿ ಉದ್ಯೋಗದಲ್ಲಿದ್ದಾರೆ.ತೃಪ್ತಿ ಚೌಟ ಇವರ ಸಹೋದರಿ.

ಕಾರ್ಯಕರ್ತರ ತೀರ್ಮಾನವೇ ಅಂತಿಮ
ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ ಕ್ಯಾ|ಬ್ರಿಜೇಶ್ ಚೌಟ ಅವರ ಹೆಸರು ಘೋಷಣೆಯಾದ ಬೆನ್ನಲ್ಲೇ, ಪುತ್ತಿಲ ಪರಿವಾರದ ಮುಂದಿನ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.ಈ ಕುರಿತು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರನ್ನು ಮಾತನಾಡಿಸಿದಾಗ, ‘ಇಲ್ಲಿ ನನ್ನೊಬ್ಬನ ತೀರ್ಮಾನ ಏನೂ ಇಲ್ಲ.ನಮ್ಮ ಪರಿವಾರದ ಕಾರ್ಯಕರ್ತರ ತೀರ್ಮಾನವೇ ಅಂತಿಮ’ ಎಂದಷ್ಟೆ ಪ್ರತಿಕ್ರಿಯಿಸಿದ್ದಾರೆ.ಒಂದೊಮ್ಮೆ ಈ ಬಾರಿಯೂ ದ.ಕ.ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಅರುಣ್ ಕುಮಾರ್ ಪುತ್ತಿಲ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ವ್ಯಾಪಕವಾಗಿ ಪ್ರಚಾರವಾಗಿತ್ತು.ಇದೀಗ ಅಭ್ಯರ್ಥಿ ಬದಲಾಗಿರುವ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ನಡೆ ನಿಗೂಢವಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಹಿಂದುತ್ವದ ಸಿದ್ಧಾಂತದಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪಽಸಿ,ವೀರೋಚಿತ ಸೋಲು ಕಂಡಿರುವ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಯಾಗುವುದು ಮತ್ತು ಪುತ್ತಿಲ ಪರಿವಾರವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ವಿಚಾರದ ಕುರಿತು ಬಿಜೆಪಿ ಮತ್ತು ಪುತ್ತಿಲ ಪರಿವಾರದ ಪ್ರಮುಖರ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಇನ್ನೂ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ.ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಬಿಜೆಪಿ ಅಧ್ಯಕ್ಷತೆ ನೀಡುವುದಾದರೆ ಮಾತ್ರ ಅವರು ಬಿಜೆಪಿಗೆ ಸೇರ್ಪಡೆಯಾಗಿ ಪುತ್ತಿಲ ಪರಿವಾರವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಕುರಿತು ಪುತ್ತಿಲ ಪರಿವಾರದ ಕಾರ್ಯಕರ್ತರು ಈಗಾಗಲೇ ತಮ್ಮ ನಿರ್ಧಾರವನ್ನು ಬಹಿರಂಗವಾಗಿ ಪ್ರಕಟಿಸಿದ್ದರು.ಪಕ್ಷಕ್ಕೆ ಬೇಷರತ್ ಆಗಿ ಬರುವುದಾದರೆ ಸ್ವಾಗತ.ಪಕ್ಷದ ಹುದ್ದೆ ನೀಡುವ ವಿಚಾರ ಏನಿದ್ದರೂ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಪಕ್ಷದ ನಾಯಕರು ತೀರ್ಮಾನಿಸುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರ ಸಹಿತ ಪ್ರಮುಖರು ಸ್ಪಷ್ಟಪಡಿಸಿದ್ದರು.ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಅರುಣ್ ಕುಮಾರ್ ಪುತ್ತಿಲ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಮತ್ತು ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ ದ.ಕ.ಜಿಲ್ಲೆಯಲ್ಲಿ ಪುತ್ತಿಲ ಪರಿವಾರದ ಸ್ಪರ್ಧೆ ಇರಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಬಹಿರಂಗವಾಗಿ ಘೋಷಿಸಿದ್ದರು.

LEAVE A REPLY

Please enter your comment!
Please enter your name here