ಮಾ.17: ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

0

ಪುತ್ತೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಮಾ.17ರಂದು ಸಂಜೆ ಗಂಟೆ 4ಕ್ಕೆ ಪುತ್ತೂರು ಅನುರಾಗ ವಠಾರದಲ್ಲಿ ಜರುಗಲಿದೆ ಎಂದು ಕರ್ನಾಟಕ ಸಂಘ ಪುತ್ತೂರು ಘಟಕದ ಅಧ್ಯಕ್ಷ ಬಿ ಪುರಂದರ ಭಟ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ಕರ್ನಾಟಕ ಸಂಘ ಪುತ್ತೂರು, ಶ್ರೀ ಲಕ್ಷ್ಮೀಶ ತೋಳ್ಪಾಡಿ ಸಾರ್ವಜನಿಕ ಅಭಿನಂದನಾ ಸಮಿತಿ ಪುತ್ತೂರು ಸಹಯೋಗದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಪ್ರಾಧ್ಯಾಪಕರಾಗಿರುವ ಸಾಹಿತಿ ಡಾ|ನರೇಂದ್ರ ರೈ ದೇರ್ಲ ಅವರು ಕಾರ್ಯಕ್ರಮ ಉದ್ಘಾಟಸಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಂಬಯಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಹಿರಿಯ ವಿದ್ವಾಂಸ ಡಾ. ತಾಳ್ತಜೆ ವಸಂತಕುಮಾರ ಅವರು ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ಪ್ರಾಧ್ಯಾಪಕ ಡಾ. ವರದರಾಜ ಚಂದ್ರಗಿರಿ ಅವರು ಲಕ್ಷ್ಮೀಶ ತೋಳ್ಪಾಡಿಯವರ ಭಾರತ ಯಾತ್ರ ಕೃತಿಯ ಕುರಿತು ಮಾತನಾಡಲಿದ್ದಾರೆ. ಹಿರಿಯ ಸಾಹಿತಿ ಗುರುರಾಜ ಮಾರ್ಪಳ್ಳಿ ಅವರು ಅಭಿನಂದನಾ ನುಡಿಗಳನ್ನಾಡಲಿದ್ದರೆ. ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಅವರು ಗೌರವ ಉಪಸ್ಥಿತಿಯಲ್ಲಿರುತ್ತಾರೆ. ಸಾರ್ವಜನಿಕರ ಪರವಾಗಿ ಸವಣೂರು ಸೀತಾರಾಮ ರೈ ಶುಭಸಂಶನೆ ಮಾಡಲಿದ್ದಾರೆ. ಮಧ್ಯಾಹ್ನ ಗಂಟೆ 3 ರಿಂದ ಡಾ. ಶೋಭಿತಾ ಸತೀಶ್ ಮತ್ತು ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕೋಶಾಧ್ಯಕ್ಷ ಬಿ ಐತ್ತಪ್ಪ ನಾಯ್ಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here