ಪೆರಾಬೆ: ಪೆರಾಬೆ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ವಿಕಲಚೇತನರ ಸಮನ್ವಯ ಗ್ರಾಮಸಭೆ ಮಾ.14ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿದ್ದ ಕಡಬ ತಾ.ಪಂ.ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಅಕ್ಷತಾ ರವರು ಇಲಾಖೆಯ ಸೌಲಭ್ಯಗಳ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಲಿನಿಯವರು ಶೇ.5ರ ಅನುದಾನದ ಮಾಹಿತಿ ನೀಡಿದರು. ಆರೋಗ್ಯ ಸಮುದಾಯ ಅಧಿಕಾರಿ ರಮ್ಯಾರವರು ಆರೋಗ್ಯ ಇಲಾಖೆಯ ಸೌಲಭ್ಯಗಳ ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷೆ ವೇದಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗ್ರಂಥಾಲಯದ ಮೇಲ್ವಿಚಾರಕಿ ಜಯಕುಮಾರಿ, ಆರೋಗ್ಯ ಸುರಕ್ಷಾಧಿಕಾರಿ ಮೋಹನಾಂಗಿ, ಸದಸ್ಯರು, ಆಶಾಕಾರ್ಯಕರ್ತೆಯರು, ಆಲಂಕಾರು ಗ್ರಾ.ಪಂ.ಪುನರ್ವಸತಿ ಕಾರ್ಯಕರ್ತ ಮೋನಪ್ಪ ಹಾಗೂ ವಿಕಲಚೇತನರು, ಪೋಷಕರು ಉಪಸ್ಥಿತರಿದ್ದರು. ಪೆರಾಬೆ ಗ್ರಾ.ಪಂ.ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮುತ್ತಪ್ಪರವರು ಕಾರ್ಯಕ್ರಮ ನಿರೂಪಿಸಿದರು.