ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಇದರ ಶತಮಾನೋತ್ಸವ ಸವಿ ನೆನಪಿಗೆ ಸುಮಾರು ಒಂದೂವರೆ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಂಘದ ನೂತನ ಕಟ್ಟಡಕ್ಕೆ ಮಾ.17ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಶ್ರೀ ಕಾಣಿಯೂರು ಮಠದ ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಊರಿನ ಹಿರಿಯ ಸಹಕಾರಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡರವರು ತಿಳಿಸಿದ್ದಾರೆ.
ಕಾಣಿಯೂರು ಶ್ರೀವರಿಗೆ ಕಾರ್ಯಕ್ರಮಕ್ಕೆ ಆಹ್ವಾನ:
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಪ್ರಧಾನ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರನ್ನು ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ, ನಿರ್ದೇಶಕರಾದ ವಿಶ್ವನಾಥ ದೇವಿನಗರ, ಪರಮೇಶ್ವರ ಅನಿಲ, ಮಾಜಿ ನಿರ್ದೇಶಕ ಪದ್ಮಯ್ಯ ಗೌಡ ಅನಿಲ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ ಮತ್ತಿತರರು ಉಪಸ್ಥಿತರಿದ್ದರು