ನಿಡ್ಪಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನ ರೂ.50,000 ಹಾಗೂ ಶಾಸಕರ ಅನುದಾನ ರೂ.50,000 ಒಟ್ಟು ರೂ.ಒಂದು ಲಕ್ಷ ಅನುದಾನದಲ್ಲಿ ನಿರ್ಮಾಣ ಗೊಂಡ ಮುಂಡೂರು ಅಂಗನವಾಡಿ ಕೇಂದ್ರದ ವಿಸ್ತರಿಸಿದ ಕಟ್ಟಡವನ್ನು ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಮಾ.13ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.
ಮುಂಡೂರು ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ವಾರಿಜಾ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಭಾಸ್ಕರ ಕರ್ಕೇರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಲಯ ಮೆಲ್ವೀಚಾರಕಿ ನಾಗರತ್ನ, ನವಶಕ್ತಿ ಯುವಕ ಮಂಡಲದ ಅಧ್ಯಕ್ಷ ಬಾಲಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಮಂಜುಳಾ ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ದೇವಕಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಂಡೂರು ಶಾಲಾ ಸಹಶಿಕ್ಷಕಿ ರಶ್ಮಿತಾ ಜೆ ವಂದಿಸಿದರು. ಬಾಲವಿಕಾಸ ಸಮಿತಿ ಸದಸ್ಯ ಗುರುವ ಕಾರ್ಯಕ್ರಮ ನಿರೂಪಿಸಿದರು.