ರೋಟರಿ ಪುತ್ತೂರು ಹಾಗೂ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಇದರ ಸಹಭಾಗಿತ್ವದಲ್ಲಿ ಇನ್ನರ್ ವೀಲ್ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸ್ವರ್ಣ ಇವುಗಳ ಸಹಕಾರದಲ್ಲಿ ರಾಧಾಕೃಷ್ಣ ಬಿಲ್ಡಿಂಗ್ ನಲ್ಲಿರುವ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ನಲ್ಲಿ ಮಾ.15 ರಂದು ರಕ್ತದಾನ ಶಿಬಿರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಿತು.

 ರೋಟರಿ ಕ್ಲಬ್ ಪುತ್ತೂರು ಇದರ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದ ನಿಮಿತ್ತ ಕ್ಲಬ್ ಹಮ್ಮಿಕೊಂಡ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಆಗಮಿಸಿದ  ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್ ಕೇಶವ್ ರವರು ಬ್ಲಡ್ ಬ್ಯಾಂಕಿನಲ್ಲಿ ನಡೆಸಲಾದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ವೀಕ್ಷಿಸಿ ಶುಭ ಹಾರೈಸಿದರು. ಕ್ಲಬ್ ನಿಯೋಜಿತ ಅಧ್ಯಕ್ಷ ಡಾ.ಶ್ರೀಪತಿ ರಾವ್ ರವರು ಬ್ಲಡ್ ಬ್ಯಾಂಕ್ ಬೆಳೆದು ಬಂದ ಬಗ್ಗೆ ವಿವರಿಸಿದರು. ಕ್ಲಬ್ ಅಧ್ಯಕ್ಷ ಜೈರಾಜ್ ಭಂಡಾರಿರವರು ಸ್ವಾಗತಿಸಿ, ಕಾರ್ಯದರ್ಶಿ ಸುಜಿತ್ ಡಿ ರೈ ವಂದಿಸಿದರು. ರೋಟರಿ ವಲಯ ಐದರ ಅಸಿಸ್ಟೆಂಟ್ ಗವರ್ನರ್ ನರಸಿಂಹ ಪೈ, ವಲಯ ಸೇನಾನಿ ಝೇವಿಯರ್ ಡಿ’ಸೋಜ,  ಕ್ಲಬ್ ಸಮುದಾಯ ವಿಭಾಗದ ನಿರ್ದೇಶಕ ಸೋಮಶೇಖರ್ ರೈ, ಕ್ಲಬ್ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here