ಬೆಳಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

0

ಸ್ವಯಂಪ್ರೇರಿತರಾಗಿ ಮುನ್ನುಗ್ಗಿದರೆ ಯಶಸ್ಸು ಖಂಡಿತ- ವಚನ ಪ್ರದೀಪ್ ಅರುವಗುತ್ತು

ಕಾಣಿಯೂರು : ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಯಂಪ್ರೇರಿತರಾಗಿ ಮುನ್ನುಗ್ಗಿದರೆ ಯಶಸ್ಸು ಖಂಡಿತ. ದಿಟ್ಟತನದಿಂದ ಸವಾಲುಗಳನ್ನು ಎದುರಿಸಿ ಸಮಾಜಕ್ಕೆ ಮಾದರಿಯಾಗಬಹುದು ಎಂದು ಮಾನವ ಸಂಪನ್ಮೂಲ ತರಬೇತುದಾರ ವಚನಾ ಪ್ರದೀಪ್‌ ಅರುವಗುತ್ತು ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರಿನ ಮಹಿಳಾ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ ನಡೆದ ಮಹಿಳಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ| ಶಂಕರ ಭಟ್ ಪಿ ವಹಿಸಿದ್ದರು. ಮಹಿಳಾ ಘಟಕದ ಸಂಚಾಲಕ ಶಾಂತಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ದಿನದ ಮಹತ್ವನ್ನು ಸಾರುವ ಗೀತೆಯನ್ನು ರಕ್ಷಾ ಮತ್ತು ಬಳಗದವರು ಹಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here