ಪುತ್ತೂರು: ದ.ಕ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರ ಸಂಘ ನಿ., ಮಂಗಳೂರು ಇದರ ಪುತ್ತೂರು ಶಾಖೆಯ ಉದ್ಘಾಟನೆಯ ಸಭಾಕಾರ್ಯಕ್ರಮ ಮಾ.16ರಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರ ಸಂಘದ ಅಧ್ಯಕ್ಷೆ ಜಯಲಕ್ಷ್ಮೀ ಬಿ.ಆರ್. ಅಧ್ಯಕ್ಷತೆ ವಹಿಸಲಿದ್ದಾರೆ. ಎಪಿಎಂಸಿ ಮಾಜಿ ಅದ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅದ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ನೆರವು ವಿತರಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದ.ಕ.ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್.ರಮೇಶ್, ದ.ಕ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಕುಮಾರ್, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಬಿ. ಪ್ರೇಮ ಶಿವಮೊಗ್ಗ, ಅತಿಥಿ ಅಭ್ಯಾಗತರಾಗಿ ಪುತ್ತೂರು ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ. ಕೊಸ್ತಾ, ಪುತ್ತೂರು ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳಾ ಕಾಳೆ, ನಿವೃತ್ತ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಜೆ.ಎ., ದ.ಕ.ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ತಾರಾ ಜೆ. ಬಲ್ಲಾಳ್, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಕೋಶಾಧಿಕಾರಿ ವಿಶಾಲಾಕ್ಷಿ, ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಕಮಲ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.