ಮಂಗಳೂರಿನಲ್ಲಿ ಪುತ್ತಿಲ ಬಿಜೆಪಿ ಸೇರ್ಪಡೆಗೆ ಕ್ಷಣಗಣನೆ – ಪುತ್ತೂರು ಬಿಜೆಪಿ‌ ಕಚೇರಿಯಲ್ಲಿ ಬಾಗಿಲು ಮುಚ್ಚಿ ಜಿಲ್ಲಾಧ್ಯಕ್ಷರಿಂದ ತುರ್ತು ಸಭೆ

0

ಪುತ್ತೂರು: ಮಂಗಳೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗಲು ಕ್ಷಣಗಣನೆ ಆರಂಭವಾಗಿರುವಂತೆಯೇ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಾಗಿಲು ಮುಚ್ಚಿ ತುರ್ತುಸಭೆ ನಡೆಯುತ್ತಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ‌ ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಯುತ್ತಿದ್ದು, ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್, ಹಿಂದೂ ಸಂಘಟನೆಯ ಮಾರ್ಗದರ್ಶಕರಾಗಿರುವ ಆದರ್ಶ ಆಸ್ಪತ್ರೆಯ ಡಾ.ಎಮ್ ಕೆ ಪ್ರಸಾದ್, ಮಾಜಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸಹಿತ ಬಿಜೆಪಿಯ ಹಲವಾರು ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ‌. ಈ ಸಭೆಗೆ ಮಾದ್ಯಮ ಪ್ರತಿನಿಧಿಗಳಿಗೆ ಅವಕಾಶವಿರಲಿಲ್ಲ.

LEAVE A REPLY

Please enter your comment!
Please enter your name here