ಪುತ್ತೂರು ಮಹಿಳಾ ದಿನಾಚರಣೆಯಲ್ಲಿ ಕೃಷಿ, ಸಾಮಾಜಿಕ ಕ್ಷೇತ್ರದ ಸಾಧಕಿಯರಿಗೆ ಸನ್ಮಾನ

0

ಪುತ್ತೂರು: ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು, ತಾಲೂಕು ಮಹಿಳಾ ಮಂಡಲ, ನವ್ಯಶ್ರೀ ಮಹಿಳಾ ಮಂಡಲ, ವನಿತಾ ಸಮಾಜ ಹಾರಾಡಿ, ಲಯನ್ಸ್ ಕ್ಲಬ್ ಪುತ್ತೂರು ಮತ್ತು ಮಹಿಳಾ ವಿವಿದ್ದೋದ್ದೇಶ ಸಹಕಾರಿ ಸಂಘ, ಒಡಿಯೂರು ವಜ್ರಮಾತ ಮಹಿಳಾ ಘಟಕ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಮಹಿಳಾ ದಿನಾಚರಣೆ’ ಕಾರ್ಯಕ್ರಮವು ಮಾ.15ರಂದು ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯಿ ಕಾರ್ಯಕ್ರಮ ಉದ್ಘಾಟಿಸಿ ಮಹಿಳಾ ಸಬಲೀಕರಣ ದ ಬಗ್ಗೆ ಸವಿಸ್ತಾರವಾಗಿ ಮಾತಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ಜಲಜಾಕ್ಷಿ ಅವರು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಜಿಲ್ಲಾ ಸಂಘದ ಅಧ್ಯಕ್ಷೆ ತಾರಾ ಬಲ್ಲಾಳ್ ಅನುಭವ ಹಂಚಿಕೊಂಡರು. ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶಾಂತಿ ಹೆಗಡೆ ಅವರು ಅಧ್ಯಕ್ಷತೆ ವಹಿಸಿದ್ದರು.

ಸಾಧಕರಿಗೆ ಸನ್ಮಾನ:
ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ತಾರಾ ಬಲ್ಲಾಳ್ ಮತ್ತು ಮೋಹಿನಿ ಅವರನ್ನು ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಯಮುನರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು, ಜಿಲ್ಲಾ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಉಷಾ ನಾಯಕ್, ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು. ವತ್ಸಲ ರಾಜ್ಞಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ವಸಂತಿ ಮತ್ತು ಬಳಗದವರಿಂದ ಪ್ರಾರ್ಥನೆಯೊಂದಿಗೆ ಸಭೆ ಆರಂಭಗೊಂಡಿತು. ನಯನ ರೈ ವಜ್ರಮಾತ ಮಹಿಳಾ ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು. ಪ್ರೇಮಲತಾ ರಾವ್ ವಂದಿಸಿದರು. ಹರಿಣಾಕ್ಷಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here