ಮಾ.17: ನೆಲ್ಯಾಡಿ ಹೊಸಮಜಲುನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

0

ನೆಲ್ಯಾಡಿ: ಜೇಸಿಐ ನೆಲ್ಯಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೌಕ್ರಾಡಿ, ವರ್ತಕರ ಹಾಗೂ ಕೈಗಾರಿಕಾ ಸಂಘ ಕೌಕ್ರಾಡಿ-ನೆಲ್ಯಾಡಿ, ಅಶ್ವತ್ಥ ಗೆಳೆಯರ ಬಳಗ ಹೊಸಮಜಲು, ಕೌಕ್ರಾಡಿ ಗ್ರಾ.ಪಂ.ಹಾಗೂ ಹೊಸಮಲು ಸರಕಾರಿ ಹಿ.ಪ್ರಾ.ಶಾಲಾ ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಸುಳ್ಯ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಕಾರ್ಯಾಗಾರ ಹಾಗೂ ಉಚಿತ ಔಷಧಿ ವಿತರಣಾ ಶಿಬಿರ ಮಾ.17ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆ ತನಕ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ನೆಲ್ಯಾಡಿ ಜೇಸಿಐ ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು ಉದ್ಘಾಟಿಸಲಿದ್ದಾರೆ. ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದ ಡಾ.ಕೆ.ವಿ.ಚಿದಾನಂದ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಜನರಲ್ ಮೆಡಿಸಿನ್, ಶಸ್ತ್ರ ಚಿಕಿತ್ಸೆ, ಮಕ್ಕಳ, ಕಿವಿ, ಮೂಗು, ಗಂಟಲು, ನೇತ್ರ ಚಿಕಿತ್ಸೆ, ಚರ್ಮ, ಲೈಂಗಿಕ, ಸ್ತ್ರೀರೋಗ, ಎಲುಬು ಮತ್ತು ಕೀಲು, ದಂತ, ಶ್ವಾಸಕೋಶ ಹಾಗೂ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here