ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನ – ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ನಾೖಕ್‌

0

ಉಪ್ಪಿನಂಗಡಿ: ರಾಜ್ಯದ ಎ ಗ್ರೇಡ್ ದೇವಸ್ಥಾನವಾಗಿರುವ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ರಾಜ್ಯ ಧಾರ್ಮಿಕ ಪರಿಷತ್ ಆಯ್ಕೆ ಮಾಡಿದ್ದು, ಈ ಪೈಕಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ನಾೖಕ್‌ ಆಯ್ಕೆಯಾಗಿದ್ದಾರೆ.
ಸದಸ್ಯರಾಗಿ ಮಾಜಿ ಜಿ.ಪಂ. ಅಧ್ಯಕ್ಷ ಸೋಮನಾಥ, ಡಾ. ರಮ್ಯಾ ರಾಜಾರಾಮ್, ಅನಿತಾ ಕೇಶವ ಗೌಡ, ಬಿ. ಗೋಪಾಲಕೃಷ್ಣ ರೈ ಬೆಳ್ಳಿಪ್ಪಾಡಿ, ಬಿ. ಕೃಷ್ಣರಾವ್ ಆರ್ತಿಲ, ಬಿ. ದೇವದಾಸ್ ರೈ ಬೆಳ್ಳಿಪ್ಪಾಡಿ, ಎಂ. ವೆಂಕಪ್ಪ ಪೂಜಾರಿ ಮರುವೇಲು ಹಾಗೂ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಹರೀಶ್ ಉಪಾಧ್ಯಾಯ ಅವರನ್ನು ನೇಮಕ ಮಾಡಲಾಗಿದೆ.
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ ಬಯಸಿ 14 ಅರ್ಜಿಗಳು ಸಲ್ಲಿಕೆಯಾಗಿತ್ತು. ಅವರಲ್ಲಿ 9 ಮಂದಿಯನ್ನು ಧಾರ್ಮಿಕ ದತ್ತಿ ಇಲಾಖೆಯು ವ್ಯವಸ್ಥಾಪನಾ ಸಮಿತಿಗೆ ನೇಮಕ ಮಾಡಿ ಮಾ.13ರಂದು ಆದೇಶ ಹೊರಡಿಸಲಾಗಿತ್ತು. ಇವರು ಮುಂದಿನ ಮೂರು ವರ್ಷಗಳ ಅವಽಗೆ ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯಲ್ಲಿ ಇರುತ್ತಾರೆ.
ಅಧ್ಯಕ್ಷರ ಆಯ್ಕೆ: ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾದ 9 ಮಂದಿಯ ಒಮ್ಮತದ ತೀರ್ಮಾನದಿಂದ ಅಧ್ಯಕ್ಷರ ಆಯ್ಕೆ ನಡೆದಿದ್ದು, 34ನೆಕ್ಕಿಲಾಡಿ ಗ್ರಾಮದ ಉದಯಗಿರಿಯ ಕೆ. ರಾಧಾಕೃಷ್ಣ ನಾೖಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಥಮ ದರ್ಜೆ ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಹಾಗೂ ದ.ಕ. ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದಾರೆ. ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಇವರು ಈ ಹಿಂದೆ ಕೂಡಾ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿದ್ದವರು.
ಅಧಿಕಾರ ಸ್ವೀಕಾರ: ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ ಅವರು ಮಾ.15ರಂದು ನೂತನ ವ್ಯವಸ್ಥಾಪನಾ ಸಮಿತಿ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭ ದೇವಾಲಯದ ವ್ಯವಸ್ಥಾಪಕ ವೆಂಕಟೇಶ್ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here