ದ.ಕ ಜಿಲ್ಲಾ ಎಸ್‌ಸಿಡಿಸಿಸಿ ಬ್ಯಾಂಕ್ ನ ಸತತ 7 ಬಾರಿ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಅವರಿಗೆ ಕೆ ಸೀತಾರಾಮ ರೈ, ಅಶ್ವಿನ್ ಎಲ್ ಶೆಟ್ಟಿಯವರಿಂದ ಅಭಿನಂದನೆ

0

ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಅವರಿಂದ ಸಹಕಾರಿ ಕ್ಷೇತ್ರದ ಮೂಲಕ ರಾಷ್ಟ್ರ ಮಟ್ಟದಲ್ಲಿ ದ.ಕ ಜಿಲ್ಲೆಗೆ ಕೀರ್ತಿ – ಕೆ ಸೀತಾರಾಮ ರೈ ಸವಣೂರು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸತತ 7ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ.ಎಮ್ ಎನ್.ರಾಜೇಂದ್ರ ಕುಮಾರ್ ಅವರನ್ನು ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಮತ್ತು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ ಅವರು ಮಂಗಳೂರು ಎಸ್‌ಸಿಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಮಾ.16ರಂದು ಬೆಳಿಗ್ಗೆ ಅಭಿನಂದಿಸಿದರು.


ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಅವರಿಂದ ಸಹಕಾರಿ ಕ್ಷೇತ್ರದ ಮೂಲಕ ರಾಷ್ಟ್ರ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ :
ಈ ಸಂದರ್ಭದಲ್ಲಿ ಮಾತನಾಡಿದ ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು, ಸಹಕಾರಿ ಕ್ಷೇತ್ರದ ಮೂಲಕ ರಾಷ್ಟ್ರ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡಿರ ಡಾ.ಎಂ.ಎನ್ .ರಾಜೇಂದ್ರ ಕುಮಾರ್‌ ಅವರ ಮೂಲಕ ಆಗಿದೆ . ಸಹಕಾರಿ ಕ್ಷೇತ್ರದ ಮೂಲಕ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಸಹಕಾರಿ ಬ್ಯಾಂಕ್ ಹಲವು ಸಂಸ್ಥೆಗಳು ಬೆಳೆಯಲು ಸಹಾಯ ನೀಡಿದ ಕಾರಣ ಜಿಲ್ಲೆಯಲ್ಲಿ ಸಾಕಷ್ಟು ಕುಟುಂಬ ಗಳಿಗೆ ಆಧಾರವಾಗಿದೆ. ಮುಂದೆಯೂ ಸಹಕಾರಿಗಳ ಕನಸು ನನಸು ಮಾಡುವಂತಾಗಲಿ ಎಂದರು.


LEAVE A REPLY

Please enter your comment!
Please enter your name here