ಅರುಣ್ ಕುಮಾರ್ ಪುತ್ತಿಲರಿಗೆ ಜಿಲ್ಲಾ ಬಿಜೆಪಿಯಿಂದ ಬುಲಾವ್ – ಮಂಗಳೂರಿಗೆ ತೆರಳಲು ಕಚೇರಿ ಮುಂದೆ ಜಮಾಯಿಸಿದ ಪುತ್ತಿಲ ಪರಿವಾರದ ಕಾರ್ಯಕರ್ತರು

0

ಪುತ್ತೂರು: ಬಿಜೆಪಿಯೊಂದಿಗೆ ಪುತ್ತಿಲ ಪರಿವಾರ ವಿಲೀನವಾಗಲಿದೆ. ಈ ನಿಟ್ಟಿನಲ್ಲಿ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಮಾ.16ರಂದು ಸಂಜೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲು ಪುತ್ತಿಲ ಪರಿವಾರ ಸಿದ್ಧತೆ ನಡೆಸಿದೆ.

ಬಿಜೆಪಿಯ ಜಿಲ್ಲಾ ನಾಯಕರು ತಿಳಿಸಿರುವಂತೆ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಕಾರ್ಯಕರ್ತರು ಮಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದು, ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಕಚೇರಿಯ ಮುಂದೆ ಪರಿವಾರದ ಕಾರ್ಯಕರ್ತರು ಜಮಾಯಿಸಿದ್ದು, ಎಲ್ಲರೂ ಮಂಗಳೂರಿಗೆ ಹೊರಡಲು ಸಿದ್ಧತೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here