ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಅಧಿಕೃತ ಸೇರ್ಪಡೆ

0

ಪುತ್ತೂರು:ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರನ್ನು ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸ್ವಾಗತಿಸಿದ ಬಳಿಕ ಮಾ.16ರಂದು ಸಂಜೆ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಪುತ್ತಿಲ ಪರಿವಾರದ ಅಸಂಖ್ಯಾತ ಕಾರ್ಯಕರ್ತರೊಂದಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪಕ್ಷದ ಶಾಲು ಹಾಕಿ, ಸದಸ್ಯತ್ವ ನೀಡಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಬರಮಾಡಿಕೊಂಡರು.ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್, ನಗರ ಅಧ್ಯಕ್ಷ ಅನಿಲ್ ತೆಂಕಿಲ ಮತ್ತಿತರರನ್ನೂ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಲಾಯಿತು.ಈ ಸಂದರ್ಭ ಜಿಲ್ಲಾ ಚುನಾವಣಾ ಉಸ್ತುವಾರಿ ನಿತಿನ್ ಕುಮಾರ್, ಜಿಲ್ಲಾ ಪ್ರಭಾರಿ ಪ್ರೇಮಾನಂದ ಶೆಟ್ಟಿ, ಮಾಜಿ ಜಿಲ್ಲಾ ಅಧ್ಯಕ್ಷ ಸುದರ್ಶನ್, ಜಿಲ್ಲಾ ಪದಾಧಿಕಾರಿಗಳು, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್.ಗೌರಿ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here