ಒಂದೂವರೆ ಕೋಟಿ ವೆಚ್ಚದ ನೂತನ ಕಟ್ಟಡಕ್ಕೆ ಕಾಣಿಯೂರು ಶ್ರೀಯವರಿಂದ ಶಿಲಾನ್ಯಾಸ
ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಇದರ ಶತಮಾನೋತ್ಸವ ಸವಿ ನೆನಪಿಗೆ ಸುಮಾರು ಒಂದೂವರೆ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಂಘದ ನೂತನ ಕಟ್ಟಡಕ್ಕೆ ಮಾ 17ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಶ್ರೀ ಕಾಣಿಯೂರು ಮಠದ ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಶುಭಹಾರೈಸಿದರು.
ಅರ್ಚಕ ಪ್ರಶಾಂತ್ ಭಟ್ ಕಟ್ಟತ್ತಾರು ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ,ಉಪಾದ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಸಿ.ಜೆ. ಚಂದ್ರಕಲಾ ಜಯರಾಮ ಅರುವಗುತ್ತು, ಪ್ರದೀಪ್ ಆರ್ ಗೌಡ ಅರುವಗುತ್ತು, ಶ್ರೀ ಮಹಾಲಿಂಗೇಶ್ವರ ಐಟಿಐ ಕಾಲೇಜಿನ ಸಂಚಾಲಕ ಯು.ಪಿ.ರಾಮಕೃಷ್ಣ ಗೌಡ, ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರವೀಣ್ ಕುಂಟ್ಯಾನ, ಕುಮಾರಧಾರ ಫಾರ್ಮ್ಸ್ ನ ವಿಜಯ ಕಮಾರ್ ಸೊರಕೆ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ, ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಕುಂಬ್ಲಾಡಿ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಗ್ರಾಮ ಪಂಚಾಯತ್ ಸದಸ್ಯರು, ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಚಾರ್ವಾಕ, ಕಾಣಿಯೂರು, ದೋಳಾಡಿ ಗ್ರಾಮದ ಎಲ್ಲಾ ಕೃಷಿಕ ಸಹಕಾರಿ ಬಂಧುಗಳು ಉಪಸ್ಥಿತರಿದ್ದರು.