ಪುತ್ತೂರು: ಬಲ್ನಾಡು ಗ್ರಾಮದ ಬುಳೇರಿಕಟ್ಟೆ ಅಗರ್ತಬೈಲು ಬಳಕ್ಕ ಬಂಗೇರ ಕುಟುಂಬದ ತರವಾಡು ಮನೆಯ ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠಾ ದಿನಾಚರಣೆ ಹಾಗೂ ದೈವಗಳ ವಾರ್ಷಿಕ ನೇಮೋತ್ಸವ ಮಾ.15 ರಿಂದ 17ರವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಮಾ.17ರಂದು ಬೆಳಿಗ್ಗೆ ಕುಟುಂಬದ ಧರ್ಮದೈವ ಧೂಮಾವತಿ ದೈವದ ನರ್ತನಾದಿ ಉತ್ಸವ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
