206 ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 4,581 ಯುವ ಮತದಾರರು – ಎ.ಸಿ ಜುಬಿನ್ ಮೊಹಪಾತ್ರ

0

ಪುತ್ತೂರು: ಚುನಾವಣಾ ಆಯೋಗದ ನಿರ್ದೇಶನದಂತೆ ದ.ಕ. ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, 2024 ಜ.22 ರಿಂದ 2024ರ ಮಾರ್ಚ್ 17 ರವರೆಗೆ ಕ್ಷೇತ್ರದಲ್ಲಿ ಒಟ್ಟು 2,13,481 ಮತದಾರರಿದ್ದಾರೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾಧಿಕಾರಿ ಆಗಿರುವ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಪಾತ್ರ ಅವರು ಹೇಳಿದ್ದಾರೆ.


ಪುತ್ತೂರು ಸಹಾಯಕ ಕಮೀಷನರ್ ಕೋರ್ಟ್ ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿ 1,04,965 ಪುರುಷರು, 1,08,568 ಮಹಿಳಾ ಮತದಾರರಿದ್ದು, ಮಹಿಳಾ ಮತದಾರರೇ ಹೆಚ್ಚಾಗಿದ್ದಾರೆ. ಆಯೋಗದ ನಿರ್ದೇಶನದಂತೆ ಚುನಾವಣೆಗೆ ನಾಮ ಪತ್ರ ಸಲ್ಲಿಕೆಯ 10 ದಿನಗಳ ಮುಂಚಿನವರೆಗೆ ಅಂದರೆ ಮಾ. 24ವರೆಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದೆ. ಅರ್ಹ ಮತದಾರರು ನಿಗದಿತ ಸಮಯದೊಳಗೆ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳುವಂತೆ ಮನವಿ ಮಾಡಿದರು. ಪುತ್ತೂರು 206 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,581 ಯುವ ಮತದಾರರನ್ನು ಗುರುತಿಸಲಾಗಿದ್ದು, 85 ವರ್ಷ ಮೇಲ್ಪಟ್ಟ ಮತ್ತು ವಿಕಲಚೇತನ ಸೇರಿದಂತೆ 4186 ಮತದಾರರಿದ್ದಾರೆ ಎಂದವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ತಹಸೀಲ್ದಾರ್ ಪುರಂದರ ಹೆಗ್ಡೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಹನುಮ ರೆಡ್ಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here