ನೆಲ್ಯಾಡಿ: ಕೌಕ್ರಾಡಿ-ದೋಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ದೋಷಗಳ ಪರಿಹಾರ ಕಾರ್ಯಕ್ರಮಗಳಿಗೆ ಮಾ.18ರಂದು ಚಾಲನೆ ನೀಡಲಾಯಿತು.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ, ಭದ್ರದೀಪ ಸಮರ್ಪಣೆ, ಮುಷ್ಠಿ ಕಾಣಿಕೆ ಸಮರ್ಪಣೆ, ಸರ್ಪಸಂಸ್ಕಾರ ಮಂಗಲ ಹೋಮ, ಆಶ್ಲೇಷಬಲಿ, ಪವಮಾನ ಹೋಮ, ವಟು ಆರಾಧನೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ನಡೆಯಿತು. ಸಂಜೆ ದುರ್ಗಾಪೂಜೆ, ಸುದರ್ಶನ ಹೋಮ, ಅಘೋರ ಹೋಮ, ಅವಾಹನೆ, ಬಾಧಾಕರ್ಷಣೆ, ಉಚ್ಛಾಟನೆ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರರೂ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರೂ ಆದ ಸುಬ್ರಹ್ಮಣ್ಯ ಬಾಳ್ತಿಲ್ಲಾಯ, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಅನುದೀಪ್ ಬಾಳ್ತಿಲ್ಲಾಯ, ಕಾರ್ಯದರ್ಶಿ ರವಿಭಟ್ ಕೆಮ್ಮಣಮಕ್ಕಿ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿ ದೋಂತಿಲ, ಟ್ರಸ್ಟ್‌ನ ಅಧ್ಯಕ್ಷರಾದ ಮಹಾಬಲ ಶೆಟ್ಟಿ ದೋಂತಿಲ, ಕಾರ್ಯದರ್ಶಿ ಪದ್ಮಯ ಗೌಡ ತೋಟ, ಕೋಶಾಧಿಕಾರಿ ಸುಂದರ ಬಾಣಜಾಲು, ಸದಸ್ಯರಾದ ಸುಬ್ರಹ್ಮಣ್ಯ ಆಚಾರ್ಯ, ಉದಯಕುಮಾರ್ ದೋಂತಿಲ, ವಿಶ್ವನಾಥ ಗೌಡ ಕಾಂತುಪಳಿಕೆ, ಶೀನಪ್ಪ ಗೌಡ ಪಟ್ಟೆ, ಜಿ.ಪಂ.ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು, ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ಟಿ., ಡಾ.ಸದಾನಂದ ಕುಂದರ್, ರವಿಚಂದ್ರ ಹೊಸವಕ್ಲು ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಬಾಳ್ತಿಲ್ಲಾಯ ಕುಟುಂಬಸ್ಥರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ನಾಳೆ ಬಾಲಾಲಯದಲ್ಲಿ ದೇವರ ಪ್ರತಿಷ್ಠೆ:
ಮಾ.19ರಂದು ಬೆಳಿಗ್ಗೆ, ಸಂಜೆ ದೋಷಗಳ ಪರಿಹಾರವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮಾ.20ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಸಂಹಾರತತ್ತ್ವ ಹೋಮ, ತತ್ತ್ವ ಕಲಶ ಪೂಜೆ, ಅನುಜ್ಞಾಕಲಶ ಪೂಜೆ, ಅನುಜ್ಞಾಕಲಶಾಭಿಷೇಕ, ಸಂಹಾರ ತತ್ತ್ವ ಕಲಶಾಭಿಷೇಕ, ಧ್ಯಾನ ಸಂಕೋಚ ಕ್ರಿಯೆ, ಜೀವಕಲಶ ಪೂಜೆ, ಜೀವೋದ್ವಾಸನ ಕ್ರಿಯೆ, ಬಾಲಾಲಯದಲ್ಲಿ ಶ್ರೀ ಮಹಾವಿಷ್ಣು ಹಾಗೂ ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.