ನೆಲ್ಯಾಡಿ: ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೆಲ್ಯಾಡಿ ಇಲ್ಲಿ ಪಿಎಂಶ್ರೀ ಯೋಜನೆ ಹಾಗೂ ಊರವರ ಸಹಕಾರದಿಂದ ನೂತನವಾಗಿ ಮಕ್ಕಳಿಗಾಗಿ ನಿರ್ಮಿಸಿದ ಮಿನಿಪಾರ್ಕ್ ಅನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಭಾಗೀರಥಿ ಮುರುಳ್ಯ ಅವರು, ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಠಡಿಗೆ ಹೆಚ್ಚುವರಿ ಅನುದಾನವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿದರು. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಬಿಲಾಲ್, ಉಪಾಧ್ಯಕ್ಷೆ ರೇಷ್ಮ ಶಶಿ, ಸದಸ್ಯ ಅಬ್ದುಲ್ ಜಬ್ಬಾರ್, ಎಸ್‌ಡಿಎಂಸಿ ಅಧ್ಯಕ್ಷ ಬಿನೋಜ್, ಉಪಾಧ್ಯಕ್ಷೆ ಸವಿತಾ, ಜಿ.ಪಂ.ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಬಾಣಜಾಲು, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೋಟರಿ ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ, ಸಿಆರ್‌ಪಿ ಪ್ರಕಾಶ್ ಬಾಕಿಲ, ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ಸರಕಾರಿ ನೌಕರರ ಸಂಘದ ಕಡಬ ತಾಲೂಕು ಅಧ್ಯಕ್ಷರೂ, ಶಾಲಾ ಶಿಕ್ಷಕರೂ ಆದ ವಿಮಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಗುರು ವೀಣಾ ಮಸ್ಕರೇನ್ಹಸ್ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಜಯಂತಿ ವಂದಿಸಿದರು. ಶಿಕ್ಷಕರು ಸಹಕರಿಸಿದರು.