ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಇದರ ವಾರ್ಷಿಕ ಮಹಾಸಭೆಯು ಮಾ.16ರಂದು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಜರುಗಿತು.
ಪ್ರಸಕ್ತ ಸಾಲಿನ ಪದಾಧಿಕಾರಿಗಳನ್ನೇ ಮುಂದಿನ ವರ್ಷಕ್ಕೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಗುಂಡ್ಯಡ್ಕ ಈಶ್ವರ ಭಟ್ ಮತ್ತು ಮಾ.ಪರೀಕ್ಷಿತ್ ಇವರುಗಳನ್ನು ಕ್ರಮವಾಗಿ ಉಪಾಧ್ಯಕ್ಷ ಸ್ಥಾನ ಮತ್ತು ಸಹ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಿಕೊಳ್ಳಲಾಯಿತು. ಸಂಘದ ಗೌರವ ಕಾರ್ಯದರ್ಶಿ ರಂಗನಾಥ್ ರಾವ್ ವಾರ್ಷಿಕ ವರದಿಯನ್ನು ಮಂಡಿಸಿದರು. ಉಪಾಧ್ಯಕ್ಷ ಗುಡ್ಡಪ್ಪ ಬಲ್ಯ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿದರು. ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಆನಂದ ಸವಣೂರು ವಂದಿಸಿದರು. ಸಭೆಯಲ್ಲಿ ಮಹಿಳಾ ಸಂಘದ ಅಧ್ಯಕ್ಷೆ, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಬಳಿಕ ಪಾರ್ತಿ ಸುಬ್ಬ ವಿರಚಿತ ವಿಭೀಷಣ ಶರಣಾಗತಿ ಯಕ್ಷಗಾನ ತಾಳಮದ್ದಳೆ ನಡೆಯಿತು.