ಪುತ್ತೂರು: ಉಪ್ಪಿನಂಗಡಿ- ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ಪ್ರೆಸ್, ಕಾಂಚನ ಮತ್ತು ವಾಟರ್ ಸಪ್ಲೈ ಫೀಡರ್ ಮತ್ತು 110/33/11ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ & ಕೆಮ್ಮಾರ ಫೀಡರ್‌ನಲ್ಲಿ ಮಾ. 21 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
110ಕೆ.ವಿ. ನೆಟ್ಲಮುಡ್ನೂರು-ಕರಾಯ ಮತ್ತು 110ಕೆ.ವಿ. ನೆಟ್ಲಮುಡೂರು- ಮಾಡಾವು ವಿದ್ಯುತ್ ಮಾರ್ಗದ ಗೋಪುರ ಸಂಖ್ಯೆ: 27 ರಲ್ಲಿ ತುರ್ತಾಗಿ ದುರ್ಬಲ ಜಂಪರ್ ಬದಲಾವಣೆ, ತುರ್ತು ಮಾರ್ಗ ನಿರ್ವಹಣೆ ಮಾಡುವ ಸಲುವಾಗಿ ಮಾ.21ರಂದು ಅಪರಾಹ್ನ 02:00 ರಿಂದ ಅಪರಾಹ್ನ 4:00 ಗಂಟೆಯವರೆಗೆ 110ಕೆ.ವಿ. ನೆಟ್ಲಮುಡ್ನೂರು-ಕರಾಯ ಮತ್ತು 110ಕೆ.ವಿ. ನೆಟ್ಲಮುಡ್ನೂರು- ಮಾಡಾವು ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಹಾಗೂ 110/33/11ಕೆವಿ ಮಾಡಾವು, 33/11ಕೆವಿ ಸುಬ್ರಹ್ಮಣ್ಯ, ಗುತ್ತಿಗಾರು, ಬೆಳ್ಳಾರೆ, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಹಾಗೂ 110/33/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮರ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.