ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಮತ ಯಂತ್ರಗಳನ್ನು ಸಹಾಯ ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಜುಬಿನ್ ಮೋಹಪಾತ್ರ ಅವರ ನೇತೃತ್ವದಲ್ಲಿ ಮಾ.20 ರ ರಾತ್ರಿ ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಭದ್ರತಾ ಕೊಠಡಿಯಲ್ಲಿ ಇರಿಸಲಾಯಿತು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಇವಿಎಮ್ ಮತ ಯಂತ್ರವನ್ನು ತಂದ ಲಾರಿಯಿಂದ ಸೀಲ್ ತೆರವು ಮಾಡಿ ಬಳಿಕ ಒಂದೊಂದೆ ಇವಿಎಮ್ ಅನ್ನು ತೆಗೆದು ಭದ್ರತಾ ಕೊಠಡಿಯಲ್ಲಿ ಇರಿಸಲಾಯಿತು.
ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಕಾಂಗ್ರೆಸ್ ನ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಪೂರ್ಣೇಶ್, ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ರಂಜಿತ್ ಬಂಗೇರ ಅವರ ಉಪಸ್ಥಿತಿಯಲ್ಲಿ ಭದ್ರತೆಯನ್ನು ಪರಿಶೀಲಿಸಲಾಯಿತು. ಈ ಸಂದರ್ಭ ತಹಸೀಲ್ದಾರ್ ಕುಂಞಿ ಅಹಮ್ಮದ್, ಡಿವೈಎಸ್ಪಿ ಅರುಣ್ ನಾಗೇಗೌಡ, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಸತೀಸ್ ಬಿ.ಎಸ್, ಉಪತಹಸೀಲ್ಧಾರ್ ಸುಲೋಚನಾ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.