ಪುತ್ತೂರಿನಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಗಾಂಜಾ ನಶೆಯಲ್ಲಿದ್ದ ಮೂವರು ಆರೋಪಿಗಳ ಬಂಧನ

0

ಪುತ್ತೂರು: ಪುತ್ತೂರು ನಗರ‌ ಪೊಲೀಸರಿಗೆ ಬಂದ ಮಾಹಿತಿಯಂತೆ ಎರಡು ಕಡೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಗಾಂಜಾ ಸೇವಿಸಿ ನಶೆಯಲ್ಲಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಾ.20ರಂದು ನಡೆದಿದೆ.


ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಾರ್ವಜನಿಕ‌ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಪೊಲೀಸ್‌ ಠಾಣೆ ಎಸ್.ಐ ಸುಬ್ರಹ್ಮಣ್ಯ ಅವರು ಸಿಬ್ಬಂದಿಯೊಂದಿಗೆ ಅಲ್ಲಿಗೆ ತೆರಳಿ ಗಾಂಜಾ ನಶೆಯಲ್ಲಿದ್ದ ಬೈಪಾಸ್ ರಸ್ತೆಯ ಖಲಂದರ್ ಶಾಹ್ (41 ವ) ಎಂಬವರನ್ನು ವಶಕ್ಕೆ ಪಡೆದು ಅವರನ್ನು‌ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.ಈ ವೇಳೆ ಖಲಂದರ್ ಶಾಹ್ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಅವರ ವಿರುದ್ಧ ಪೊಲೀಸರು ಕಲಂ: 27(b) NDPS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಪುತ್ತೂರು ಪುರಭವನದ ಬಳಿ ಸಾರ್ವಜನಿಕ ಪ್ರದೇಶದಲ್ಲಿ ಇಬ್ಬರು ವ್ಯಕ್ತಿ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಪೊಲೀಸ್‌ ಠಾಣಾ ಇನ್ ಸ್ಪೆಕ್ಟರ್ ಸತೀಶ್‌ ಜಿ.ಜೆ ರವರು ಸಿಬ್ಬಂದಿಗಳೊಂದಿಗೆ ಅಲ್ಲಿಗೆ ತೆರಳಿದಾಗ ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಇಬ್ಬರನ್ನೂ ತಡೆದು ವಿಚಾರಿಸಲಾಗಿ, ಬಪ್ಪಳಿಗೆ ಮನೆ, ಪುತ್ತೂರು ಕಸಬಾ ಗ್ರಾಮದ ನಿವಾಸಿ ಬಿ.ಉಮ್ಮರ್‌ ಫಾರೂಕ್‌ (36) ಹಾಗೂ ಮುಕ್ಕಚೇರಿ, ಉಳ್ಳಾಲ, ಮಂಗಳೂರು ತಾಲೂಕು ನಿವಾಸಿ ಕೆ.ಮೊಹಿದ್ದಿನ್‌ (43) ಎಂಬುದಾಗಿ ತಿಳಿಸಿದ್ದರು. ಅವರು ನಶೆಯಲ್ಲಿದಂತೆ ಕಂಡು ಬಂದ ಹಿನ್ನೆಲೆಯಲ್ಲಿ ಅವರುಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ನಿಷೇಧಿತ ಗಾಂಜಾ ಅಮಲುಪದಾರ್ಥ ಸೇವನೆ ಮಾಡಿರುವುದು ದೃಢಪಟ್ಟಿದ್ದು ಅವರ ವಿರುದ್ಧ ಕಲಂ: 27(b) NDPS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here