ಬಿಳಿಯೂರು: ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವನೆ ಆರೋಪ-ಪೊಲೀಸ್ ವಶ

0

ಪುತ್ತೂರು: ಉಪ್ಪಿನಂಗಡಿ ಸಮೀಪ ಬಿಳಿಯೂರು ಗ್ರಾಮದ ಮೈರಕಟ್ಟೆ ಎಂಬಲ್ಲಿ ಸಾರ್ವಜನಿಕ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದ ಕೆಳಗೆ ಅಮಲು ಪದಾರ್ಥ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ವಾಸು ಪೂಜಾರಿ(69 ವ.)ಎಂಬವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಮಾ.20ರಂದು ರಾತ್ರಿ ನಡೆದಿದೆ.
ಉಪ್ಪಿನಂಗಡಿ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿಗಳು ರೌಂಡ್ಸ್‌ನಲ್ಲಿದ್ದ ಸಂದರ್ಭ ಬಿಳಿಯೂರು ಗ್ರಾಮದ ಮೈರಕಟ್ಟೆ ಎಂಬಲ್ಲಿ ವಾಸು ಪೂಜಾರಿ ಅವರು ಸಾರ್ವಜನಿಕ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದ ಕೆಳಗೆ ಕುಳಿತು ಗ್ಲಾಸಿಗೆ ಅಮಲು ಪದಾರ್ಥ ಹಾಕಿ ಕುಡಿಯುತ್ತಿರುವುದು ಕಂಡು ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವನೆ ಮಾಡಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಯಾ ಪರವಾನಿಗೆಯನ್ನು ಪಡೆದುಕೊಳ್ಳದೇ ಇರುವ ಹಿನ್ನೆಲೆಯಲ್ಲಿ ವಾಸು ಪೂಜಾರಿ ಅವರನ್ನು ಹಾಗೂ ಅವರು ಕುಡಿಯಲು ಉಪಯೋಗಿಸುತ್ತಿದ್ದ ಸೊತ್ತನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 35/2024, ಕಲಂ: 15(ಎ) 32(3) ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here