ಕಾಣಿಯೂರು : ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆ ಪೋಷಕರ ಸಭೆಯು ನಡೆಯಿತು.
ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಈ ಸಂಸ್ಥೆ ಪಠ್ಯ ಪಠ್ಯೇತರ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಶೈಕ್ಷಣಿಕ ದಾಖಲೆ ಮಾಡಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಬಹಳಷ್ಟಿದೆ. ನಾವೆಲ್ಲರೂ ಸಂಸ್ಥೆಯ ಉನ್ನತಿಗಾಗಿ ಶ್ರಮಿಸೋಣ ಎಂದರು. ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಮಾತನಾಡಿ, ಹಗಲಿರುಳು ದುಡಿಯುತ್ತಿರುವ ಶಿಕ್ಷಕ ವೃಂದ, ಸರ್ವ ವಿಧದಲ್ಲಿಯೂ ಸಹಕರಿಸುತ್ತಿರುವ ಪೋಷಕ ಬಂಧುಗಳು ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಂಸ್ಥೆ ಸದೃಢವಾಗಿದೆ ಎಂದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಶುಭ ಹಾರೈಸಿದರು. ಮುಖ್ಯಗುರು ಸರಸ್ವತಿ ಎಂ ಪ್ರಾಸ್ತಾವಿಕ ಮಾತಿನೊಂದಿಗೆ ಶೈಕ್ಷಣಿಕ ವಿಚಾರಗಳನ್ನು ತಿಳಿಸಿದರು. ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷೆ ಜ್ಞಾನೇಶ್ವರಿ, ಹಿರಿಯ ಶಿಕ್ಷಕಿಯರಾದ ಹೇಮ ನಾಗೇಶ್ ರೈ , ಸವಿತಾ ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕು ಅನುಶ್ರೀ ಪ್ರಾರ್ಥಿಸಿದರು. ವಿನಯ ವಿ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅನಿತಾ ಜೆ ರೈ ವಂದಿಸಿದರು.