ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಅರಿಯಡ್ಕ ಸುಬ್ಬಯ್ಯ ರೈ ರಂಗಮಂಟಪ ಉದ್ಘಾಟನೆ

0

ಪುತ್ತೂರು: ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಉದ್ಯಮಿ ರೋಟೆರಿಯನ್ ಅರಿಯಡ್ಕ ಚಿಕ್ಕಪ್ಪ ನಾಕ್‌ರವರು ಕೊಡುಗೆ ನೀಡಿದ ಸುಮಾರು 5 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಅರಿಯಡ್ಕ ಸುಬ್ಬಯ್ಯ ರೈ ರಂಗಮಂಟಪವನ್ನು ಮಾ.15ರಂದು ಉದ್ಘಾಟಿಸಲಾಯಿತು. ರೋಟರಿ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಎಚ್.ಆರ್.ಕೇಶವರವರು ರಂಗಮಂಟಪವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಚಿಕ್ಕಪ್ಪ ನಾೖಕ್‌ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರೋಟರಿಯ ಅಧ್ಯಕ್ಷ ಜಯರಾಜ್ ಭಂಡಾರಿ, ಕಾರ್ಯದರ್ಶಿ ಸುಜಿತ್ ಡಿ.ರೈ, ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜರೋಡಿ, ಸದಸ್ಯರುಗಳಾದ ವಿನೋದ್ ಶೆಟ್ಟಿ ಮುಡಾಲ, ಶೀನಪ್ಪ ನಾಯ್ಕ, ಚಿತ್ರಾ, ಕೆಪಿಎಸ್ ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಅಶೋಕ್ ಪೂಜಾರಿ ಬೊಳ್ಳಾಡಿ, ಉದ್ಯಮಿ ಪುರಂದರ ರೈ ಮಿತ್ರಂಪಾಡಿ, ಕೆಪಿಎಸ್ ಪ್ರಾಂಶುಪಾಲ ಶರ್ಮಿಳಾ, ಉಪ ಪ್ರಾಂಶುಪಾಲ ಮಮತಾ ಕೆ.ಎಸ್, ಮುಖ್ಯಗುರು ಶೀಲಾವತಿ ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ವೃಂದ, ಎಸ್‌ಡಿಎಂಸಿ ಸದಸ್ಯರುಗಳು, ರೋಟರಿ ಸದಸ್ಯರುಗಳು ಉಪಸ್ಥಿತರಿದ್ದರು. ಕೆಪಿಎಸ್ ನಿಕಟಪೂರ್ವ ಕಾರ್ಯಾಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ ಸ್ವಾಗತಿಸಿ, ಕಾರ್ಯಾಧ್ಯಕ್ಷ ರಕ್ಷಿತ್ ರೈ ಮುಗೇರು ವಂದಿಸಿ,ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here