ಲೋಕಸಭಾ ಚುನಾವಣೆ ಹಿನ್ನೆಲೆ: ಮದುವೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯವಲ್ಲ

0

ಬೆಂಗಳೂರು:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ನೀತಿ ಸಂಹಿತೆ ಜಾರಿಗೊಂಡಿದೆ.ಆದರೆ, ಮದುವೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿರುವುದಾಗಿ ವರದಿಯಾಗಿದೆ.


ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಚುನಾವಣಾ ಆಯೋಗವು, ಮಾದರಿ ಚುನಾವಣೆ ನೀತಿ ಸಂಹಿತೆ ಎನ್ನುವುದು ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಪಽಸಿದ ಅಭ್ಯರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ.ಸಾರ್ವಜನಿಕರಿಗೆ ಯಾವುದೇ ನಿರ್ಬಂಧವಿಲ್ಲ.ಮದುವೆ ಸೇರಿದಂತೆ ಯಾವುದೇ ಕೌಟುಂಬಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲು ಚುನಾವಣಾಽಕಾರಿಗಳ ಅನುಮತಿ ಬೇಕಿಲ್ಲ ಎಂದು ಆಯೋಗ ತಿಳಿಸಿದೆ.


ಯಾವುದೇ ಧಾರ್ಮಿಕ ಆಚಾರ-ವಿಚಾರ, ಸಂಪ್ರದಾಯಗಳಿಗೆ ಮಾದರಿ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ.ಇದಕ್ಕೆ ಅನುಮತಿ ಪಡೆಯುವ ಅಗತ್ಯವೂ ಇಲ್ಲ.ಆದರೆ ಧಾರ್ಮಿಕ ಆಚರಣೆಗಳು ರಾಜಕೀಯ ಕಾರ್ಯಕ್ರಮಗಳಾಗಿ ಪರಿವರ್ತನೆಯಾಗಬಾರದು.ರಾಜಕೀಯ ಕಾರ್ಯಕ್ರಮವಾಗಿ ಪರಿವರ್ತನೆಯಾದರೆ ಅದು ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ.

LEAVE A REPLY

Please enter your comment!
Please enter your name here