





ಪುತ್ತೂರು: ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಪಾಪೆಮಜಲು ಶ್ರೀ ಬ್ರಹ್ಮಬೈದರ್ಕಳ ಗರಡಿಗೆ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾ. 22 ರಂದು ಭೇಟಿ ನೀಡಿದರು. ಈ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ, ಚನಿಲ ತಿಮ್ಮಪ್ಪ ಶೆಟ್ಟಿ, ಸಚಿನ್ ರೈ ಪಾಪೆಮಜಲು ಮತ್ತಿತರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು. ಗರಡಿಯ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಕೆ. ಪೆರ್ವೋಡಿಯ ಮತ್ತು ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ ಸಮಿತಿಯ ಪದಾಧಿಕಾರಿಗಳು ಸ್ವಾಗತಿಸಿದರು.










