ಪುತ್ತೂರು: ರಕ್ತದಾನಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ, ಔಷಧಿಗಿಂತಲೂ ಹೆಚ್ಚಿನ ಮಹತ್ವವನ್ನು ರಕ್ತ ಪಡೆದುಕೊಂಡಿದ್ದು,ವಿದ್ಯಾರ್ಥಿಗಳು ರಕ್ತದಾನದ ಮಹತ್ವವನ್ನು ಅರಿತುಕೊಂಡು ಎಲ್ಲೆಡೆ ಸಾರುವ ರಾಯಭಾರಿಗಳಾಗಬೇಕು ಎಂದು ಪುತ್ತೂರು ಪ್ರಗತಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶ್ರೀಪತಿ ರಾವ್ ಹೇಳಿದರು.
ಒಂದು ಕಾಲದಲ್ಲಿ ಪುತ್ತೂರಿನಲ್ಲಿ ವೈದ್ಯಕೀಯ ಚಿಕಿತ್ಸೆಗೆ ರಕ್ತದ ಕೊರತೆ ಕಂಡುಬರುತ್ತಿತ್ತು. ಪುತ್ತೂರು ರೋಟರಿ ಸಂಸ್ಥೆಯ ಬ್ಲಡ್ ಬ್ಯಾಂಕ್ ಆರಂಭಗೊಂಡ ಬಳಿಕ ಆ ಕೊರತೆ ದೂರವಾಗಿದ್ದು, ರೋಗಿಗಳ ಪಾಲಿಗೆ ವರದಾನವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ವರದರಾಜ ಚಂದ್ರಗಿರಿ ಅವರು ಅಧ್ಯಕ್ಷತೆ ವಹಿಸಿದ್ದರು. ಕೆಲವು ವರ್ಷಗಳ ಹಿಂದೆ ರಕ್ತದಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ರಕ್ತದಾನಕ್ಕೆ ಹಿಂದೇಟು ಹಾಕುತ್ತಿದ್ದರು. ಆದರೆ ಈಗ ಕಾಲೇಜಿನ ವಿದ್ಯಾರ್ಥಿಗಳೇ ರಕ್ತದಾನದ ಬಗ್ಗೆ ಹೆಚ್ಚು ಆಸಕ್ತಿ ವಹಿಸಿರುವುದು ಆಶಾದಾಯಕ ಬೆಳವಣಿಗೆ ಎಂದರು. ರೋಟರಿ ಪುತ್ತೂರು ಎಲೈಟ್ ಅಧ್ಯಕ್ಷ ಅಬ್ದುಲ್ ರಝಾಕ್ ಕಾರ್ಸ್ ಶುಭಹಾರೈಸಿದರು, ಐಕ್ಯೂಎಸಿ ಸಂಯೋಜಕರಾದ ಡಾ.ಕಾಂತೇಶ್ ವೇದಿಕೆಯಲ್ಲಿದ್ದರು.
ಯೂತ್ ರೆಡ್ ಕ್ರಾಸ್ ಯುನಿಟ್ ಸಂಯೋಜಕ ಡಾ.ದೇವರಾಜ್ ಸ್ಚಾಗತಿಸಿದರು. ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ವರ್ಷಾ ಕೆ ಕಾರ್ಯಕ್ರಮ ನಿರ್ವಹಿಸಿದರು.