ಪುತ್ತೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ಅತ್ಯಂತ ಕಾರಣಿಕತೆಯ ಕ್ಷೇತ್ರವಾಗಿರುವ ತೆಗ್ಗು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.30 ರಂದು ನಡೆಯಲಿದೆ. ಕೆಯ್ಯೂರು ಗ್ರಾಮದ ತೆಗ್ಗು ಶಾಲಾ ಬಳಿಯಲ್ಲಿರುವ ಶ್ರೀ ವಿಷ್ಣುಮೂರ್ತಿ ದೈವಸ್ಥಾನವು ಹಲವು ವರ್ಷಗಳ ಇತಿಹಾಸ ಹೊಂದಿರುವ ಕ್ಷೇತ್ರವಾಗಿದೆ. ಮಾ.30 ರಂದು ಬೆಳಿಗ್ಗೆ ಗಣಪತಿ ಹೋಮ ನಡೆಯಲಿದೆ. ಸಂಜೆ 7 ಗಂಟೆಗೆ ಭಂಡಾರ ತೆಗೆಯುವುದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 11 ರಿಂದ ಕುಳಿಚ್ಚಾಟು ದೈವದ ನರ್ತನ ಸೇವೆ ನಡೆಯಲಿದೆ.ಮಾ.31 ರ ಪ್ರಾತಃಕಾಲಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ನಡೆದು ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗುಳಿಗ ದೈವ ಕೋಲ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಾಬು ತೆಗ್ಗು ಮತ್ತು ಕುಟುಂಬಸ್ಥರು ಮತ್ತು ಊರಪರವೂರ ಹತ್ತು ಸಮಸ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಳು ನಾಟಕ,ಸಾಂಸ್ಕೃತಿಕ ಕಾರ್ಯಕ್ರಮ
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಮಾ.30 ರಂದು ಸಂಜೆ 5.30 ರಿಂದ ಊರಪರವೂರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ವಿದುಷಿ ರಶ್ಮಿ ದಿಲೀಪ್ ರೈ, ಬೃಂದಾವನ ನಾಟ್ಯಾಲಯ ಕುಂಬ್ರ ಇದರ ಶಿಷ್ಯವೃಂದದವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ಕ್ಕೆ ರಾಜ್ಯಪ್ರಶಸ್ತಿ ಪುರಸ್ಕೃತ ನೃತ್ಯತಂಡ ಮಂಜು ಬ್ರದರ‍್ಸ್ ಸುಳ್ಯ ಇವರಿಂದ ನೃತ್ಯ ಕಾರ್ಯಕ್ರಮ, ರಾತ್ರಿ 1 ಗಂಟೆಯಿಂದ ಗಯಾಪದ ಕಲಾವಿದೆರ್ ಉಬಾರ್ ಅಭಿನಯದ ‘ ಮುರಳಿ ಈ ಪಿರ ಬರೊಲಿ’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.