ಪುತ್ತೂರು: ರಾಮಕುಂಜ ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಕಲ್ಲಾರೆ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಸುಮಾರು 15 ದಿನಗಳವರೆಗೆ ನಡೆಯಲಿರುವ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ ಇದರ ಉದ್ಘಾಟನಾ ಕಾರ್ಯಕ್ರಮವು ಮಾ.26ರಂದು ಪಂಚಾಯತ್ ಸಭಾಂಗಣದಲ್ಲಿ ನೆರವೇರಿತು.
ಕಾರ್ಯಕ್ರಮವನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ, ಶುಭಕೋರಿದರು. ರಾಮಕುಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಚೇತಾ ಅಧ್ಯಕ್ಷತೆ ವಹಿಸಿದರು. ನೆಮ್ಮದಿ ವೆಲ್‌ನೆಸ್ ಸೆಂಟರ್ ಕಲ್ಲಾರೆ ಇದರ ಮುಖ್ಯಸ್ಥ ಕೆ. ಪ್ರಭಾಕರ ಸಾಲ್ಯಾನ್ ಶಿಬಿರದ ಕುರಿತು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕೇಶವ ಕೆ ಗಾಂಧಿಪೇಟೆ ಹಾಗೂ ರಾಮಕುಂಜ ಪಂಚಾಯತ್ಅ ಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್
ಭಾಗವಹಿಸಿದರು. ಸಾರ್ವಜನಿಕರು ಈ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ, ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ವಿನಂತಿಸಿ, ಸಹಕಾರ ಕೋರಿದರು.