ಕಾಣಿಯೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾರೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಪೊಲೀಸರು ಪಥ ಸಂಚಲನ ನಡೆಸಿದರು. ಬೆಳ್ಳಾರೆ ಪೊಲೀಸ್ ಠಾಣೆಯಿಂದ ಆರಂಭಗೊಂಡು ನಗರದ ಮುಖ್ಯರಸ್ತೆಗಳಲ್ಲಿ ಸಾಗಿ ಸಮಾಪನಗೊಂಡಿತ್ತು. ಸಿ.ಆರ್.ಪಿ. ಎಫ್ ಹಾಗೂ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳು, ಅಧಿಕಾರಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.