ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾನ್ವೇಷನೆ ಕಾರ್ಯಕ್ರಮ

0

ಕಾಣಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಪ್ರತಿಭಾನ್ವೇಷನೆ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಶಂಕರ ಭಟ್ ಪಿ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ತೀರ್ಪುಗರರಾದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಜಗದೀಶ್ ಬಾರಿಕೆಯವರು ಮಾತನಾಡಿ ಗ್ರಾಮೀಣ ಪ್ರದೇಶದ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿರುವುದನ್ನು ಜಗದೀಶ್ ಬಾರಿಕೆ ಶ್ಲಾಘಿಸಿದರು.
ತೀರ್ಪುಗಾರರಾದ ರಂಗ ತರಬೇತಿ ನಿರ್ದೇಶಕ ರಾಕೇಶ್ ಬನಾರಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಹೆಸರನ್ನು ಉನ್ನತ ಸ್ಥಾನದಲ್ಲಿ ಗುರುತಿಸುವಂತೆ ಪ್ರದರ್ಶನ ನೀಡಿದ್ದಾರೆ ಎಂದು ರಾಕೇಶ್ ಬಿ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ವಾಮಿ ಎಸ್ ಐಕ್ಯುಎಸಿ ಸಂಚಾಲಕರು, ದೀಪ್ತಿ ಎ ಸಿ ಸಾಂಸ್ಕೃತಿಕ ಸಮಿತಿ ಸಂಚಾಲಕರು, ಕಾಲೇಜಿನ ಬೋಧಕ-ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here