ನಾಣಿಲ ಶಾಲೆಯಲ್ಲಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ

0

ಕಾಣಿಯೂರು: ನಾಣಿಲ ಶಾಲೆಯಲ್ಲಿ 7ನೇ ತರಗತಿಯ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ಅವರು ವಹಿಸಿದ್ದರು.

ಕಾಣಿಯೂರು ಗ್ರಾಮ ಪಂಚಾಯಿತಿಯ ಪ್ರಭಾರ ಅಭಿವೃದ್ಧಿ ಅಧಿಕಾರಿ ರಘು ಬಿ. ಎನ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಗುರು ಪದ್ಮಯ್ಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಳ, ವಿದ್ಯಾರ್ಥಿ ನಾಯಕ ಗಗನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಪೋಷಕರು ಮಕ್ಕಳು ಭಾಗವಹಿಸಿದರು.

LEAVE A REPLY

Please enter your comment!
Please enter your name here