





ಪುತ್ತೂರು:ಕೋಡಿಂಬಾಡಿ ಗ್ರಾಮದ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವವು ಮಾ.25ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ನಡೆಯಿತು.



ಬೆಳಿಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, 12 ತೆಂಗಿನಕಾಯಿ ಗಣಪತಿ ಹೋಮ, ಪಂಚವಿಂಶತಿ ಕಲಶ ಪ್ರತಿಷ್ಠೆ ಅಧಿವಾಸ ಹೋಮ, ಕಲಶಾಭಿಷೇಕ, ಏಕಾದಶಿ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನೆರವೇರಿತು. ಕಾರ್ಯಕ್ರಮದಲ್ಲಿ ಬೆಳಿಗ್ಗೆ ಸ್ಥಳೀಯ ಮಹಿಳೆಯರಿಂದ ಲಲಿತಾ ಸಹಸ್ರನಾಮ ಪಾರಾಯಣ ನೆರವೇರಿತು. ಮಧ್ಯಾಹ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಬಿ.ಕೆ ದೇವ ರಾವ್ ಅಮೈ ಬೆಳ್ತಂಗಡಿಯವರನ್ನು ಸನ್ಮಾನಿಸಲಾಯಿತು.
ಸಂಜೆ ದೈವಗಳಿಗೆ ತಂಬಿಲ, ಮಿತ್ರ ಸಮಾಜ ಮಂಡಳಿಯವರಿಂದ ಭಜನೆ, ರಾತ್ರಿ ಡಾ.ಗಾನ ಪಿಲಿಂಜರವರ ಹಾಡುಗಾರಿಕೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ರಾತ್ರಿ ಶ್ರೀದೇವಿಗೆ ಮಹಾರಂಗಪೂಜೆ, ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ವಸಂತಕಟ್ಟೆಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಉತ್ಸವಗಳು ಸಂಪನ್ನಗೊಂಡಿತು.














