ಪುತ್ತೂರು: ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ರಮಾನಾಥ ರೈರವರನ್ನು ನಿಯೋಜಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ದ.ಕ.ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಹಾಗೂ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲು ಪ್ರಚಾರ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.