ಪುಣ್ಚತ್ತಾರು- ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ

0

ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ.3,4ರಂದು ನಡೆಯಲಿರುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ ಕಾರ್ಯಕ್ರಮ ಮಾ 27ರಂದು ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊಕ್ತೇಸರ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಸಮಿತಿ ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ ಹಾಗೂ ಹುಕ್ರಪ್ಪ ಗೌಡ ಪುಣ್ಚತ್ತಾರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here