ಶ್ರೀ ಕ್ಷೇತ್ರ ಕೆಯ್ಯೂರು ದೇವಿಯ ವರ್ಷಾವಧಿ ಜಾತ್ರೋತ್ಸವ, ದರ್ಶನ ಬಲಿ – ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ

0

ಕೆಯ್ಯೂರು: ಕೆಯ್ಯೂರು ಗ್ರಾಮದ ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವಿಯ ವಾರ್ಷಿಕ ಜಾತ್ರೋತ್ಸವವು ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆದು ಮಾ.26ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದವಿತರಣೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಶ್ರೀ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಮಹೋತ್ಸವ, ವಸಂತ ಕಟ್ಟೆ ಪೂಜೆ ಬಳಿಕ “ಕೆಯ್ಯೂರು ಬೇಡಿ” ಎಂದೇ ಪ್ರಸಿದ್ಧಿ  ಪಡೆದುಕೊಂಡಿರುವ ಸುಡುಮದ್ದು ಪ್ರದರ್ಶನ ನಡೆಯಿತು.

ಮಾ.27ರಂದು ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ, ವೈಧಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ದೇವಳದ ಆಡಳಿತಾಧಿಕಾರಿ ನಮಿತಾ ಎ.ಕೆ, ಉತ್ಸವ ಸಮಿತಿ ಗೌರವದ್ಯಕ್ಷ ಶಶಿಧರ ರಾವ್ ಬೊಳಿಕಲ, ಗೌರವಸಲಹೆಗಾರ ಎಸ್.ಬಿ.ಜಯರಾಮ ರೈ ಬಳಜ್ಜ, ಅಧ್ಯಕ್ಷ ಸಂತೋಷ್ ಕುಮಾರ್ ರೈ ಇಳಂತಾಜೆ, ಮಾಜಿ ವ್ಯವಸ್ಥಾಪನಾ ಸಮಿತಿ ಅದ್ಯಕ್ಷರು ಮತ್ತು ಸದಸ್ಯರುಗಳು, ಉತ್ಸವ ಸಮಿತಿ ಸಂಚಾಲಕರು ಮತ್ತು ಸದಸ್ಯರುಗಳು, ಅರ್ಚಕ ವೃಂದ, ನೌಕರವೃಂದ, ಶ್ರೀ ದುರ್ಗಾ ಭಜನಾ ಮಂಡಳಿ ಕೆಯ್ಯೂರು ಅಧ್ಯಕ್ಷರು ಮತ್ತು ಸದಸ್ಯರುಗಳು, ಊರ ಹತ್ತು ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here